HomeLatest Newsರಾಜ್ಯದ ಜನತೆಗೆ ಗುಡ್ ನ್ಯೂಸ್: ಇಂದಿನಿಂದ ಮನೆ ಬಾಗಿಲಲ್ಲೇ ಉಚಿತ ಚಿಕಿತ್ಸೆ: ರಾಜ್ಯಾದ್ಯಂತ ‘ಗೃಹ ಆರೋಗ್ಯ’...

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇಂದಿನಿಂದ ಮನೆ ಬಾಗಿಲಲ್ಲೇ ಉಚಿತ ಚಿಕಿತ್ಸೆ: ರಾಜ್ಯಾದ್ಯಂತ ‘ಗೃಹ ಆರೋಗ್ಯ’ ವಿಸ್ತರಣೆ

ಬೆಂಗಳೂರು: ಇಂದಿನಿಂದ ಗೃಹ ಆರೋಗ್ಯ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮನೆ ಬಾಗಿಲಲ್ಲಿಯೇ ಆರೋಗ್ಯ ಪರೀಕ್ಷೆ ನಡೆಸಲಾಗುವುದು.

ರಾಜ್ಯದಲ್ಲಿ ಮನೆಮನೆಗೂ ಭೇಟಿ ನೀಡಿ 30 ವರ್ಷ ಮೇಲ್ಪಟ್ಟವರ ಸಾಂಕ್ರಾಮಿಕ ಅಲ್ಲದ ರೋಗಗಳ ತಪಾಸಣೆ ನಡೆಸಲಾಗುವುದು. ಔಷಧ ವಿತರಣೆ, ಅಗತ್ಯ ಚಿಕಿತ್ಸೆಗೆ ಸಹಕರಿಸುವ ಗೃಹ ಆರೋಗ್ಯ ಯೋಜನೆಯನ್ನು ಸೋಮವಾರದಿಂದ ರಾಜ್ಯಾದ್ಯಂತ ವಿಸ್ತರಿಸಲಾಗುವುದು.

ರಕ್ತದೊತ್ತಡ, ಮಧುಮೇಹ, ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್ ನಂತಹ 14 ರೋಗಗಳ ತಪಾಸಣೆ ನಡೆಸಲಾಗುವುದು. ಮಂಗಳವಾರ, ಬುಧವಾರ, ಶುಕ್ರವಾರ, ಶನಿವಾರದಂದು ಮನೆ ಮನೆಗೆ ಆರೋಗ್ಯ ಕಾರ್ಯಕರ್ತರು ಪರೀಕ್ಷಿಸಲು ಬರಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ವರ್ಷ ಅಕ್ಟೋಬರ್ ನಲ್ಲಿ ಕೋಲಾರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಜಾರಿಗೆ ತರಲಾಯಿತು. ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯದ್ಯಂತ ವಿಸ್ತರಿಸಲಾಗುವುದು. ಮನೆಮನೆಗೆ ತೆರಳಿ 30 ವರ್ಷ ಮೇಲ್ಪಟ್ಟವರ ಸಾಂಕ್ರಾಮಿಕವಲ್ಲದ ರೋಗಗಳ ತಪಾಸಣೆ ನಡೆಸಿ ರೋಗ ಪೀಡಿತರಿಗೆ ಉಚಿತ ಔಷಧ ವಿತರಿಸಲಾಗುವುದು. ಈ ಮೂಲಕ ಅಕಾಲಿಕ ಮರಣ ತಡೆಯುವುದು ಗೃಹ ಆರೋಗ್ಯ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಉಚಿತ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆ ನೀಡಲಾಗುವುದು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಅಂತಹ ರೋಗಿಗಳನ್ನು ಆಸ್ಪತ್ರೆಗಳಿಗೆ ಶಿಫಾರಸು ಮಾಡಲಾಗುವುದು. ಕಾಯಿಲೆಯನ್ನು ಮೊದಲೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗುವುದು ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular