HomeKarnatakaರಾಜ್ಯದ ಜನತೆಗೆ ಗುಡ್ ನ್ಯೂಸ್: ಆಸ್ಪತ್ರೆಗಳಲ್ಲಿನ ಕುಂದು ಕೊರತೆ ದೂರು ನೀಡಲು ವಾಟ್ಸಾಪ್ ವ್ಯವಸ್ಥೆ

ರಾಜ್ಯದ ಜನತೆಗೆ ಗುಡ್ ನ್ಯೂಸ್: ಆಸ್ಪತ್ರೆಗಳಲ್ಲಿನ ಕುಂದು ಕೊರತೆ ದೂರು ನೀಡಲು ವಾಟ್ಸಾಪ್ ವ್ಯವಸ್ಥೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿರುವ ಕುಂದು ಕೊರತೆ ಬಗ್ಗೆ ಮಾಹಿತಿ ಅಥವಾ ಸಲಹೆ ನೀಡಲು ಆರೋಗ್ಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ವಾಟ್ಸಾಪ್ ಮೂಲಕ ಸಂಪರ್ಕಿಸುವ ವಿನೂತನ ವ್ಯವಸ್ಥೆ ಜಾರಿಗೊಳಿಸಲಾಗಿದೆ.

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿನ ಸ್ವಚ್ಛತೆ, ನೀರು, ವೈದ್ಯರು, ವೈದ್ಯಕೀಯೇತರ ಸಿಬ್ಬಂದಿ ನಿರ್ಲಕ್ಷ್ಯ, ಚಿಕಿತ್ಸೆ ಸೇರಿದಂತೆ ಯಾವುದೇ ಸಮಸ್ಯೆಗಳಿದ್ದರೂ ಸಾರ್ವಜನಿಕರು ಸಂದೇಶ ಕಳುಹಿಸಬಹುದಾಗಿದೆ. ಅಗತ್ಯವಿದ್ದಲ್ಲಿ ಫೋಟೋ, ವಿಡಿಯೋಗಳನ್ನು ಕೂಡ ಕಳುಹಿಸಬಹುದಾಗಿದೆ.

ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳೇ ನೇರವಾಗಿ ಇವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಿದ್ದಾರೆ. ದೂರು ನೀಡಿದವರ ಹೆಸರನ್ನು ಬಹಿರಂಗಪಡಿಸುವುದಿಲ್ಲ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇವಲ ಸಂದೇಶ ಮಾತ್ರ ಸ್ವೀಕರಿಸಲಾಗುವುದು, ಕರೆ ಸ್ವೀಕರಿಸುವುದಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಸಾರ್ವಜನಿಕರು ದೂರು ಅಥವಾ ಸಲಹೆ ನೀಡಲು ವಾಟ್ಸಾಪ್ ಸಂಖ್ಯೆ 94498 43001 ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular