HomeKarnatakaಬಡಜನತೆಗೆ ಗುಡ್ ನ್ಯೂಸ್ : ಸಂಕ್ರಾಂತಿಯಿಂದ ʻಇಂದಿರಾ ಕ್ಯಾಂಟೀನ್ʼ ನಲ್ಲಿ ಮುದ್ದೆ ಊಟ!

ಬಡಜನತೆಗೆ ಗುಡ್ ನ್ಯೂಸ್ : ಸಂಕ್ರಾಂತಿಯಿಂದ ʻಇಂದಿರಾ ಕ್ಯಾಂಟೀನ್ʼ ನಲ್ಲಿ ಮುದ್ದೆ ಊಟ!

ಬೆಂಗಳೂರು : ಬಡಜನತೆಗೆ ಬಿಬಿಎಂಪಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಸಂಕ್ರಾಂತಿಯಿಂದ ಇಂದಿರಾ ಕ್ಯಾಂಟೀನ್‌ ಗಳಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ಮುದ್ದೆ ಊಟ ನೀಡಲು ನಿರ್ಧರಿಸಿದೆ.

ಇಂದಿರಾ ಕ್ಯಾಂಟೀನ್‌ ಗಳಲ್ಲಿ ಮಧ್ಯಾಹ್ನ ಹಾಗೂ ರಾತ್ರಿ ಊಟಕ್ಕೆ ಮುದ್ದೆ, ಚಪಾತಿ ನೀಡುವಂತೆ ಬೇಡಿಕೆ ಕೇಳಿ ಬರುತ್ತಿತ್ತು. ಇದೀಗ ಇಂದಿರಾ ಕ್ಯಾಂಟೀನ್‌ ಗಳಲ್ಲಿ ಊಟ ಮಾಡುವವರಿಗೆ ಮುದ್ದೆ ಭಾಗ್ಯ ನೀಡಲು ಬಿಬಿಎಂಟಪಿ ಸಿದ್ಧತೆ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದಿರಾ ಕ್ಯಾಂಟೀನ್‌ ಗಳಿಗೆ ಆಹಾರ ಪೂರೈಕೆದಾರರ ಟೆಂಡರ್‌ ಆಹ್ವಾನಿಸುವುದಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು, ಶೀಘ್ರವೇ ಬಿಬಿಎಂಪಿ ಟೆಂಡರ್‌ ಆಹ್ವಾನಿಸಲಿದೆ. ಜೊತೆಗೆ ಬೆಂಗಳೂರು ನಗರದಲ್ಲಿ 19 ಮೊಬೈಲ್‌ ಇಂದಿರಾ ಕ್ಯಾಂಟೀನ್‌ ಗಳನ್ನು ದುರಸ್ತಿ ಪಡಿಸಲಾಗಿದೆ. ಮುಂದಿನ ವಾರದಲ್ಲಿ ಮೊಬೈಲ್‌ ಇಂದಿರಾ ಕ್ಯಾಂಟೀನ್‌ ಪುನರ್‌ ಆರಂಭಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular