HomeKarnatakaBudget Breaking : ರಾಜ್ಯ ಸರ್ಕಾರದಿಂದ ಬಡ ಜನತೆಗೆ ಗುಡ್ ನ್ಯೂಸ್ : 3 ಲಕ್ಷ...

Budget Breaking : ರಾಜ್ಯ ಸರ್ಕಾರದಿಂದ ಬಡ ಜನತೆಗೆ ಗುಡ್ ನ್ಯೂಸ್ : 3 ಲಕ್ಷ ಮನೆಗಳ ನಿರ್ಮಾಣ

ಬೆಂಗಳೂರು : ರಾಜ್ಯ ಸರ್ಕಾರದಿಂದ ಬಡ ಜನತೆಗೆ ಗುಡ್ ನ್ಯೂಸ್ ನೀಡಿದ್ದು, 3 ಲಕ್ಷ ಮನೆ ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

2024-25ನೇ ಸಾಲಿನಲ್ಲಿ 3 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಡಿಯಲ್ಲಿ ಪಿಎಂಎವೈ (ಎಎಚ್ ಪಿ) ಅಡಿಯಲ್ಲಿ 1,18,359 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಬಡ ಕುಟುಂಬಗಳಿಗೆ ಸೇರಿದ ಹೆಚ್ಚಿನ ಫಲಾನುಭವಿಗಳು ತಮ್ಮ ವಂತಿಗೆಯಾದ 5 ಲಕ್ಷ ರೂ.ಗಳನ್ನು ಪಾವತಿಸಲು ಸಾಧ್ಯವಾಗದ ಕಾರಣ ಯೋಜನೆ ನಿಧಾನಗೊಂಡಿದೆ.

ಫಲಾನುಭವಿಗಳು ಪಾವತಿಸಬೇಕಾದ ವಂತಿಗೆಯನ್ನು ಒಂದು ಲಕ್ಷ ರೂಪಾಯಿಗಳಿಗೆ ಸೀಮಿತಗೊಳಿಸಲು ನಮ್ಮ ಸರ್ಕಾರ ನಿರ್ಧರಿಸಿದೆ. ಉಳಿದ ಫಲಾನುಭವಿಗಳ ಪಾಲು ಸುಮಾರು 4 ಲಕ್ಷ ರೂ.ಗಳನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular