ಬೆಂಗಳೂರು: ಗ್ರಾಮ ಪಂಚಾಯಿತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಪ್ರಸ್ತುತ 81 ಸೇವೆಗಳನ್ನು ನೀಡಲಾಗುತ್ತಿದ್ದು, ಇನ್ನೂ 28 ಸೇವೆಗಳನ್ನು ಶೀಘ್ರವೇ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆರಂಭಿಸಲಾಗುವುದು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಸೇವಾ ಸಿಂಧು ಪೋರ್ಟಲ್ ಮೂಲಕ ನೀಡಲಾಗುತ್ತಿರುವ ಎಲ್ಲಾ ಸೇವೆಗಳನ್ನು ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಆರಂಭಿಸುವ ಬಗ್ಗೆ 2024- 25 ನೇ ಸಾಲಿನ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ಅಂತೆಯೇ ಗ್ರಾಮೀಣಾಭಿವೃದ್ಧಿ ಇಲಾಖೆ ವಿದ್ಯುನ್ಮಾನ ನಾಗರಿಕ ಸೇವಾ ನಿರ್ದೇಶನಾಲಯದ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಗ್ರಾಮೀಣ ಜನತೆಗೆ ಅನುಕೂಲವಾಗುವಂತೆ ಮೊದಲ ಹಂತದಲ್ಲಿ 208 ಸೇವೆಗಳನ್ನು ಬಳಸುವ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.
ಸೇವಾ ಸಿಂಧು ಪೋರ್ಟಲ್ ಮೂಲಕ 46 ಇಲಾಖೆಗಳ 800ಕ್ಕೂ ಅಧಿಕ ಸೇವೆ ನೀಡುತ್ತಿದ್ದು, ಇವುಗಳಲ್ಲಿ ಗ್ರಾಮೀಣ ಜನರಿಗೆ ಉಪಯೋಗವಾಗುವಂತಹ ಸೇವೆಗಳನ್ನು ಗ್ರಾಮ ಪಂಚಾಯಿತಿಗಳ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಕಲ್ಪಿಸಲಿದ್ದು, ಒಂದೇ ಸೂರಿನಡಿ ಗ್ರಾಮೀಣ ಜನತೆಗೆ ಎಲ್ಲ ಇಲಾಖೆಗಳ ಸೇವೆ ಸಿಗಲಿದೆ ಎಂದು ಹೇಳಿದ್ದಾರೆ.
208 ಸರ್ಕಾರಿ ಸೇವೆಗಳು ಗ್ರಾಮಪಂಚಾಯತಿ ಬಾಪೂಜಿ ಸೇವಾ ಕೇಂದ್ರದಲ್ಲಿ ಆರಂಭ
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) July 26, 2025
ರಾಜ್ಯದಾದ್ಯಂತ ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಈಗಾಗಲೇ 81 ಸರ್ಕಾರಿ ಸೇವೆಗಳನ್ನು ಒದಗಿಸಲಾಗುತ್ತಿದೆ. ಇದರೊಂದಿಗೆ ನೂತನ 208 ಸರ್ಕಾರಿ ಸೇವೆಗಳನ್ನು ಶೀಘ್ರದಲ್ಲೇ ಪ್ರಾರಂಭ ಮಾಡಲಾಗುವುದು.
2024-25 ನೇ ಸಾಲಿನ ಬಜೆಟ್'ನಲ್ಲಿ ಸೇವಾ ಸಿಂಧು… pic.twitter.com/OGZpsQ5hos