ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ವಸತಿ ಕಟ್ಟಡಗಳಿಗೆ ಒಸಿ, ಸಿಸಿ ವಿನಾಯಿತಿ

ಬೆಳಗಾವಿ(ಸುವರ್ಣಸೌಧ): ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಾದರಿಯಲ್ಲಿ ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಾಧಿನಾನುಭವ ಪ್ರಮಾಣ ಪತ್ರ(ಒಸಿ) ಪಡೆಯದ 1200 ಚದರಡಿ ನಿವೇಶನದಲ್ಲಿ ನಿರ್ಮಿಸಿದ ವಸತಿ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಪಡೆಯಲು ಅವಕಾಶ ಕಲ್ಪಿಸಿ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಒಸಿ ಇಲ್ಲದ ಕಾರಣಕ್ಕೆ ವಿದ್ಯುತ್, ನೀರಿನ ಸಂಪರ್ಕ ಪಡೆಯಲಾಗದೆ ತೊಂದರೆ ಅನುಭವಿಸುತ್ತಿರುವ ಲಕ್ಷಾಂತರ ಮನೆ ಮಾಲೀಕರಿಗೆ ಇದರಿಂದ ಅನುಕೂಲವಾಗಲಿದೆ. 1200 ಚದರ ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಿದ ವಸತಿ ಕಟ್ಟಡಗಳು ಸ್ವಾಧಿನಾನುಭವ ಪತ್ರ ಪಡೆಯುವುದರಿಂದ ವಿನಾಯಿತಿ ಸಿಗಲಿದೆ.

ಸುಪ್ರೀಂ ಕೋರ್ಟ್ ಆದೇಶದಿಂದ ಸಿಸಿ, ಒಸಿ ಇಲ್ಲದೆ ಮನೆ ನಿರ್ಮಾಣ ಮಾಡಿದವರಿಗೆ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರಕ್ಕೆ ಸಮಸ್ಯೆ ಎದುರಾಗಿತ್ತು. ಇದನ್ನು ನಿವಾರಿಸುವ ಸಲುವಾಗಿ ಸರ್ಕಾರ ಉಪವಿಧಿಗಳ ಅಡಿಯಲ್ಲಿ ಒಸಿ, ಸಿಸಿ ಇಲ್ಲದ ವಸತಿ ಕಟ್ಟಡಗಳಿಗೆ ವಿದ್ಯುತ್ ನೀರಿನ ಸಂಪರ್ಕ ನೀಡಲು ಅವಕಾಶ ಕಲ್ಪಿಸಲಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read