BREAKING : ರಾಜ್ಯದ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಬೇಡಿಕೆಗಳ ಈಡೇರಿಕೆಗೆ ಸಮಿತಿ ರಚಿಸಿ ‘ರಾಜ್ಯ ಸರ್ಕಾರ’ ಆದೇಶ..!

ಬೆಂಗಳೂರು : ಶಿಕ್ಷಕರ ಬೇಡಿಕೆಗಳ ಕುರಿತು ಪರಿಶೀಲಿಸಿ ವರದಿ ನೀಡುವ ಸಮಿತಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಏನಿದೆ ಆದೇಶದಲ್ಲಿ..?

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸದಿರುವುದು, ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗಾಗಿರುವ ಅನ್ಯಾಯವನ್ನು ಸರಿಪಡಿಸುವುದು ಹಾಗೂ ಪದವಿ ಪೂರೈಸಿದ ಶಿಕ್ಷಕರನ್ನು 6 ರಿಂದ 8ಕ್ಕೆ ಸೇವಾ ನಿರತ ವದವೀಧರ ಶಿಕ್ಷಕರೆಂದು ಒಂದು ಬಾರಿ (One Time) ಪದನಾಮೀಕರಿಸುದು ಸೇರಿದಂತ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಅಧ್ಯಕ್ಷರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ), ಬೆಂಗಳೂರು ಇವರು ಮೇಲೆ ಓದಲಾದ ವತ್ರದಲ್ಲಿ ಕೋರಿರುತ್ತಾರೆ.

ಮೇಲ್ಕಂಡ ಬೇಡಿಕೆಗಳ ಕುರಿತು ನಿಯಮಾನುಸಾರ ಕೂಲಂಕಷವಾಗಿ ವರಿಶೀಲಿಸಿ ಸದರಿ ಬೇಡಿಕೆಗಳನ್ನು ವರಿಗಣಿಸಲು ಪ್ರಸ್ತುತ ಅಸ್ತಿತ್ವದಲ್ಲಿರುವ ನಿಯಮಗಳಲ್ಲಿ ಅವಕಾಶವಿರುವ ಕುರಿತು ಹಾಗೂ ಇದರಿಂದ ಶೈಕ್ಷಣಿಕ ವ್ಯವಸ್ಥೆಯ ಮೇಲೆ ಉಂಟಾಗಬಹುದಾದ ವರಿಣಾಮಗಳು ಮತ್ತು ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸಮಗ್ರವಾದ ವರದಿ ನೀಡಲು ಸಮಿತಿಯನ್ನು ರಚಿಸಲು ಸರ್ಕಾರವು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ), ಬೆಂಗಳೂರು ಇವರ ವಿವಿಧ ಬೇಡಿಕೆಗಳನ್ನು ವರಿಗಣಿಸುವ ಕುರಿತು ಪ್ರಸ್ತುತ ಅಸ್ತಿತ್ವದಲ್ಲಿರುವ ನಿಯಮಗಳನ್ನಯ ಸಮಗ್ರವಾಗಿ ವರಿಶೀಲಿಸಿ ಸೂಕ್ತ ಶಿಫಾರಸ್ಸು ಹಾಗೂ ಸ್ಪಷ್ಟ ಅಭಿಪ್ರಾಯವನ್ನೊಳಗೊಂಡ ಸಮಗ್ರ ವರದಿಯನ್ನು ನೀಡಲು ಈ ಕೆಳಕಂಡಂತೆ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read