HomeLatest Newsಪ್ರಯಾಣಿಕರಿಗೆ ಗುಡ್ ನ್ಯೂಸ್: ಕೇಂದ್ರದಿಂದ ರಾಜ್ಯಕ್ಕೆ 5250 ಹೊಸ ಎಲೆಕ್ಟ್ರಿಕ್ ಬಸ್ ಮಂಜೂರು

ಪ್ರಯಾಣಿಕರಿಗೆ ಗುಡ್ ನ್ಯೂಸ್: ಕೇಂದ್ರದಿಂದ ರಾಜ್ಯಕ್ಕೆ 5250 ಹೊಸ ಎಲೆಕ್ಟ್ರಿಕ್ ಬಸ್ ಮಂಜೂರು

ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಶೀಘ್ರವೇ 5250 ಹೊಸ ಎಲೆಕ್ಟ್ರಿಕ್ ಬಸ್ ಗಳು ಸೇರ್ಪಡೆಯಾಗಲಿವೆ. ಪಿಎಂ ಇ-ಡ್ರೈವ್, ಇ- ಬಸ್ ಯೋಜನೆಯಡಿ ಕೇಂದ್ರದ ಸಬ್ಸಿಡಿ ಮೂಲಕ 5250 ಎಲೆಕ್ಟ್ರಿಕ್ ಬಸ್ ಗಳುಳ ಸೇರ್ಪಡೆಯಾಗಲಿದೆ.

ಬಿಎಂಟಿಸಿಗೆ 4500 ಎಲೆಕ್ಟ್ರಿಕ್ ಬಸ್ ಗಳನ್ನು ನೀಡಲಾಗುವುದು. ಉಳಿದಂತೆ ಪಿಎಂ ಇ- ಬಸ್ ಸೇವಾ ಅಡಿ ಕೆಎಸ್ಆರ್ಟಿಸಿಗೆ 350, ಎನ್.ಡಬ್ಲ್ಯೂ.ಕೆ.ಆರ್.ಟಿ.ಸಿ.ಗೆ 200 ಬಸ್ ಗಳು, ಕೆಕೆಆರ್ಟಿಸಿಗೆ 200 ಬಸ್ ಸೇರಿ ಒಟ್ಟು 750 ಎಲೆಕ್ಟ್ರಿಕ್ ಬಸ್ ಗಳನ್ನು ನೀಡಲು ಅನುಮೋದನೆ ನೀಡಲಾಗಿದೆ.

ಈ ಎಲ್ಲಾ ಎಲೆಕ್ಟ್ರಿಕ್ ಬಸ್ ಗಳನ್ನು ಗ್ರಾಸ್ ಕಾಸ್ಟ್ ಕಾಂಟ್ರಾಕ್ಟ್ ಅಡಿಯಲ್ಲಿ ಪಡೆಯಲಾಗುವುದು. ಎಲ್ಲಾ ಎಲೆಕ್ಟ್ರಿಕ್ ಬಸ್ ಗಳನ್ನು ಗುತ್ತಿಗೆ ಆಧಾರದಲ್ಲಿ ಖಾಸಗಿ ಸಂಸ್ಥೆ ಪೂರೈಸಲಿದ್ದು, ನಿರ್ವಹಣೆ ಮಾಡಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular