HomeKarnatakaರಾಜ್ಯಕ್ಕೆ ಗುಡ್ ನ್ಯೂಸ್: ಭದ್ರಾ ಮೇಲ್ದಂಡೆ ಯೋಜನೆ ಪರಿಷ್ಕೃತ ಅಂದಾಜಿಗೆ ಕೇಂದ್ರ ಸರ್ಕಾರ ಅನುಮೋದನೆ

ರಾಜ್ಯಕ್ಕೆ ಗುಡ್ ನ್ಯೂಸ್: ಭದ್ರಾ ಮೇಲ್ದಂಡೆ ಯೋಜನೆ ಪರಿಷ್ಕೃತ ಅಂದಾಜಿಗೆ ಕೇಂದ್ರ ಸರ್ಕಾರ ಅನುಮೋದನೆ

ಬೆಂಗಳೂರು: ಮಧ್ಯ ಕರ್ನಾಟಕ ಭಾಗದ ಬಯಲು ಸೀಮೆ ಪ್ರದೇಶಗಳಿಗೆ ನೀರಾವರಿ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಯ ಪರಿಷ್ಕೃತ ಅಂದಾಜು ವೆಚ್ಚ 21,167.93 ಕೋಟಿ ರೂಪಾಯಿಗೆ ಕೇಂದ್ರ ಜಲ ಶಕ್ತಿ ಸಚಿವಾಲಯದ ತಾಂತ್ರಿಕ ಸಲಹಾ ಸಮಿತಿ ಅನುಮೋದನೆ ನೀಡಿದೆ.

ಯೋಜನೆ ಸಂಪೂರ್ಣ ಅನುಷ್ಠಾನಕ್ಕೆ 16,125 ಕೋಟಿ ರೂ. ವೆಚ್ಚವಾಗಲಿದ್ದು ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ ಆರ್ಥಿಕ ನೆರವು ನೀಡುವಂತೆ ರಾಜ್ಯ ಸರ್ಕಾರ ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಜಲ ಶಕ್ತಿ ಸಚಿವಾಲಯ ತಾಂತ್ರಿಕ ಸಲಹಾ ಸಮಿತಿ ಪರಿಶೀಲಿಸಿ ಅನುದಾನ ಬಿಡುಗಡೆಗೆ ಕೇಂದ್ರಕ್ಕೆ ಶಿಫಾರಸು ಮಾಡಿತ್ತು. ಕೇಂದ್ರ ಹಣಕಾಸು ಸಚಿವಾಲಯ ಹೂಡಿಕೆಯ ಅನುಮತಿ ಸಮಿತಿ ಅನುಮೋದನೆ ನೀಡಿದ್ದು 2023- 24ರ ಬಜೆಟ್ ನಲ್ಲಿ ಯೋಜನೆಗೆ 5300 ಕೋಟಿ ರೂ. ಘೋಷಿಸಲಾಗಿತ್ತು.

ಈ ನಡುವೆ ಕೇಂದ್ರ ಜಲ ಆಯೋಗ ಯೋಜನೆ ಕುರಿತಂತೆ ಇದ್ದ ಅನುಮಾನಗಳಿಗೆ ಸ್ಪಷ್ಟೀಕರಣ ನೀಡಲು ತಿಳಿಸಿ ಪರಿಷ್ಕೃತ ಅಂದಾಜು ಮೊತ್ತದ ವಿವರ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಅದರಂತೆ ಸರ್ಕಾರ 2024- 25 ರ ಮಾರುಕಟ್ಟೆ ದರದ ಪ್ರಕಾರ ಯೋಜನೆ ಅನುಷ್ಠಾನಕ್ಕೆ 21,167.93 ಕೋಟಿ ರೂ. ಬೇಕಾಗಲಿದೆ ಎಂದು ಜನವರಿ 15ರಂದು ಪರಿಷ್ಕೃತ ಅಂದಾಜು ಪಟ್ಟಿ ಸಲ್ಲಿಸಿದ್ದು, ಯೋಜನೆಗೆ ಇದುವರೆಗೆ 11,375 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಪಟ್ಟಿಗೆ ಸಂಬಂಧಿಸಿದಂತೆ ಕೇಂದ್ರ ಜಲ ಶಕ್ತಿ ಸಚಿವಾಲಯದ ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳು ಗುರುವಾರ ನವದೆಹಲಿಯಲ್ಲಿ ಸಭೆ ನಡೆಸಿ ವಿವರಣೆ ನೀಡಿದ್ದಾರೆ. ಸಭೆ ಫಲಪ್ರದವಾಗಿದ್ದು, ಯೋಜನೆಯ ಪರಿಷ್ಕೃತ ಅಂದಾಜಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular