ರಾಜ್ಯದ ರೈತರಿಗೆ ಗುಡ್ ನ್ಯೂಸ್: ಹಗಲಿನಲ್ಲಿ ಕೃಷಿ ಪಂಪ್ಸೆಟ್ ಗೆ 7 ಗಂಟೆ ವಿದ್ಯುತ್ ಪೂರೈಕೆ

ಹುಬ್ಬಳ್ಳಿ: ರೈತರ ಕೃಷಿ ಪಂಪ್ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ 7 ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ವಿದ್ಯುತ್ ಕೊರತೆಯಾಗದಂತೆ ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಆರಂಭದಲ್ಲಿ ಮಳೆ ಕೊರತೆಯಿಂದ ವಿದ್ಯುತ್ ಉತ್ಪಾದನೆ ಕುಂಠಿತವಾಗಿತ್ತು. ಹೀಗಾಗಿ ಉತ್ತರ ಪ್ರದೇಶ, ಪಂಜಾಬ್ ರಾಜ್ಯಗಳಿಂದ ವಿದ್ಯುತ್ ಖರೀದಿಸಿ ಸಮಸ್ಯೆ ಬಗೆಹರಿಸಲಾಗಿತ್ತು. ಈಗ ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 100 ಸಬ್ ಸ್ಟೇಷನ್ ಗಳನ್ನು ಮುಂದಿನ ಒಂದು ವರ್ಷದಲ್ಲಿ ನಿರ್ಮಿಸಲಾಗುವುದು. ಈಗಾಗಲೇ ಎರಡು ಉಪ ಕೇಂದ್ರ ಲೋಕಾರ್ಪಣೆಯಾಗಿವೆ. ಸಚಿವ ಸಂಪುಟದಲ್ಲಿ ಚರ್ಚಿಸಿ ಟೆಂಡರ್ ಕೂಡ ನೀಡಲಾಗಿದೆ. ಕೃಷಿ ಪಂಪ್ಸೆಟ್ ಗಳಿಗೆ ಹಗಲಿನ ಹೊತ್ತಿನಲ್ಲಿ 7 ಗಂಟೆ ವಿದ್ಯುತ್ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read