HomeLatest Newsರಾಜ್ಯದ ರೈತರಿಗೆ ಗುಡ್ ನ್ಯೂಸ್: ಬೆಳೆ ಹಾನಿ ಹಿನ್ನೆಲೆ ಸಾಲ ಮನ್ನಾ ಮಾಡುವ ಬಗ್ಗೆ ಸಿಎಂ...

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಬೆಳೆ ಹಾನಿ ಹಿನ್ನೆಲೆ ಸಾಲ ಮನ್ನಾ ಮಾಡುವ ಬಗ್ಗೆ ಸಿಎಂ ಸಿದ್ಧರಾಮಯ್ಯ ಭರವಸೆ

ಕಲಬುರಗಿ: ಬೆಳೆ ಹಾನಿ ಹಿನ್ನೆಲೆಯಲ್ಲಿ ರೈತರು ಸಾಲಮನ್ನಾ ಮಾಡುವಂತೆ ಕೇಳುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಬೆಳೆಹಾನಿ ಹಿನ್ನೆಲೆಯಲ್ಲಿ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ. ವಾರದಲ್ಲಿ ಜಂಟಿ ಸಮೀಕ್ಷೆಯ ಅಂತಿಮ ವರದಿ ಬಂದ ಬಳಿಕ ಬೆಳೆ ಹಾನಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.

ಈ ಬಾರಿ ಉತ್ತಮ ಮಳೆಯಾಗಿದ್ದು, ಉತ್ತಮ ಬೆಳೆಗಳ ನಿರೀಕ್ಷೆಯಿತ್ತು. ಆದರೆ, ಯಾದಗಿರಿ, ಕಲಬುರಗಿ, ಬೀದರ್ ಸೇರಿ ಹಲವು ಕಡೆ ಬೆಳೆ ಹಾನಿಯಾಗಿದೆ. ಕಳೆದ ಬಾರಿ ಬೆಳೆ ಹಾನಿ ಬಗ್ಗೆ ವರದಿ ಕಳಿಸಿದಾಗ ಕೇಂದ್ರ ಸರ್ಕಾರ ಪರಿಹಾರ ನೀಡಿರಲಿಲ್ಲ. ನಾವು ಸುಪ್ರೀಂ ಕೋರ್ಟ್ ಗೆ ಹೋಗಿ ಪರಿಹಾರ ಪಡೆದುಕೊಂಡೆವು. ಈ ಬಾರಿ ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಮಾಡಲಾಗಿದೆ. ಆದರೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಆರೋಪಿಸಿದ್ದಾರೆ. ಬೆಳೆ ಹಾನಿ ಹಿನ್ನೆಲೆಯಲ್ಲಿ ರೈತರು ಸಾಲಮನ್ನಾ ಬಗ್ಗೆ ಮನವಿ ಮಾಡಿರುವುದು ಗಮನದಲ್ಲಿದ್ದು, ಅದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular