HomeLatest Newsರಾಜ್ಯದ ರೈತರಿಗೆ ಗುಡ್ ನ್ಯೂಸ್: ಡಿ. 6ರಂದು ದರ್ಖಾಸ್ತು ಪೋಡಿ ದಾಖಲೆ ವಿತರಣೆ

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಡಿ. 6ರಂದು ದರ್ಖಾಸ್ತು ಪೋಡಿ ದಾಖಲೆ ವಿತರಣೆ

ಬೆಂಗಳೂರು: ‘ನನ್ನ ಭೂಮಿ’ ಅಭಿಯಾನದಡಿ ದರ್ಖಾಸ್ತು ಪೋಡಿ ಸಂಬಂಧ ಅಳತೆ ಮಾಡಿದ ಭೂಮಿ ಮಾಲೀಕರಿಗೆ ದಾಖಲೆ ನೀಡುವ ಸಮರ್ಪಣ ದಿನ ಕಾರ್ಯಕ್ರಮವನ್ನು ಡಿಸೆಂಬರ್ 6ರಂದು ಹಾಸನದಲ್ಲಿ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಗಳ ಹಸ್ತಾಂತರ ಮಾಡಲಿದ್ದಾರೆ.

ವಿಕಾಸಸೌಧದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ಮಾಸಿಕ ಸಭೆ ನಡೆಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪೋಡಿ ದುರಸ್ತಿ ಮಾಡಿಸಲು ಜನ ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇತ್ತು. 2018 ರಿಂದ 2023ರ ನಡುವೆ ಕೇವಲ 8500 ಪ್ರಕರಣಗಳಲ್ಲಿ ಮಾತ್ರ ಪೋಡಿ ಮಾಡಲಾಗಿತ್ತು. ಇದರಿಂದ ಜನರಿಗೆ ಆಗುವ ಸಮಸ್ಯೆ ಅರಿತು ಈ ವರ್ಷ ಜನವರಿಯಲ್ಲಿ ನನ್ನ ಭೂಮಿ ಅಭಿಯಾನದಡಿ 1.49 ಲಕ್ಷ ಜಮೀನುಗಳನ್ನು ದರ್ಖಾಸ್ತು ಪೋಡಿ ಅಳತೆ ಮಾಡಲು ತೆಗೆದುಕೊಳ್ಳಲಾಗಿತ್ತು ಎಂದರು.

ಹಾಸನ ಜಿಲ್ಲೆಯಲ್ಲಿ 17 ಸಾವಿರ ಪ್ರಕರಣಗಳನ್ನು ಅಳತೆಗೆ ತೆಗೆದುಕೊಂಡಿದ್ದು, ಸಾಂಕೇತಿಕವಾಗಿ ದರ್ಖಾಸ್ತುಗೊಂಡ ಪೋಡಿ ದಾಖಲೆಗಳನ್ನು ಜನರಿಗೆ ನೀಡಲು ಸಮರ್ಪಣಾ ದಿನ ಆಚರಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಪೋಡಿ ದಾಖಲೆ ಹಸ್ತಾಂತರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular