ಬೆಂಗಳೂರು : ರಾಜ್ಯದ ಮೀನುಗಾರರಿಗೆ ‘ಜೀವ ರಕ್ಷಕ ಜಾಕೆಟ್’ ವಿತರಿಸಲು ಸರ್ಕಾರ ನಿರ್ಧರಿಸಿದೆ.
ವಿಧಾನಸಭೆಯಲ್ಲಿ ಮೀನುಗಾರಿಕೆ ಸಚಿವರಾದ ಮಂಕಾಳ ವೈದ್ಯ ಈ ಕುರಿತು ಮಾಹಿತಿ ನೀಡಿದ್ದಾರೆ.
ಮೀನುಗಾರಿಕೆಗಾಗಿ ಆಳ ಸಮುದ್ರಕ್ಕೆ ತೆರಳುವ ದೋಣಿಗಳು ಅಪಘಾತಕ್ಕೆ ಒಳಗಾಗಿ, ಮೀನುಗಾರರು ಮೃತರಾಗುತ್ತಿರುವ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸರ್ಕಾರದಿಂದಲೇ ಮೀನುಗಾರರಿಗೆ ಜೀವರಕ್ಷಕ ಜಾಕೆಟ್ ವಿತರಣೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಮೀನುಗಾರಿಕೆ ಸಚಿವರಾದ ಮಂಕಾಳ ವೈದ್ಯ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

