HomeLatest Newsರಾಜ್ಯದ 'ಮುಜರಾಯಿ ಇಲಾಖೆ' ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಅನುಕಂಪದ ಆಧಾರಿತ ನೇಮಕಾತಿಗೆ ವಿಧೇಯಕ ಮಂಡನೆ...

ರಾಜ್ಯದ ‘ಮುಜರಾಯಿ ಇಲಾಖೆ’ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಅನುಕಂಪದ ಆಧಾರಿತ ನೇಮಕಾತಿಗೆ ವಿಧೇಯಕ ಮಂಡನೆ !

ಬೆಂಗಳೂರು : ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ಸಾವಿರಾರು ದೇವಾಲಯಗಳ ಸಿಬ್ಬಂದಿ ಹಾಗೂ ಅವರ ಕುಟುಂಬದವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕರ್ತವ್ಯದ ಅವಧಿಯಲ್ಲಿ ದೇವಸ್ಥಾನದ ಸಿಬ್ಬಂದಿ ಮರಣ ಹೊಂದಿದರೆ, ಅವರ ಕುಟುಂಬದ ಒಬ್ಬ ಸದಸ್ಯನಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡುವ ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.

ಹೌದು. ಧಾರ್ಮಿಕ ದತ್ತಿ (ಮುಜರಾಯಿ) ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಾಲಯಗಳ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕರ್ತವ್ಯದಲ್ಲಿರುವಾಗ ಸಿಬ್ಬಂದಿ ಮರಣ ಹೊಂದಿದರೆ, ಅವರ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಕೆಲಸ ನೀಡುವ ಸಂಬಂಧ ಶೀಘ್ರದಲ್ಲೇ ಹೊಸ ವಿಧೇಯಕವನ್ನು ತರಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ಘೋಷಿಸಿದ್ದಾರೆ.

ಇತರೆ ಸರ್ಕಾರಿ ಇಲಾಖೆಗಳಲ್ಲಿರುವಂತೆ ಮುಜರಾಯಿ ಇಲಾಖೆಯಲ್ಲೂ ಅನುಕಂಪದ ನೇಮಕಾತಿಗೆ ಅವಕಾಶ ಕಲ್ಪಿಸಲು ಕಾನೂನು ತಿದ್ದುಪಡಿ ಮಾಡಲಾಗುವುದು.: ಈ ಕುರಿತು ಕಾನೂನು ಇಲಾಖೆಯ ಸಲಹೆಗಳನ್ನು ಪಡೆದು, ಮುಂದಿನ ಅಧಿವೇಶನದಲ್ಲಿ ಅಧಿಕೃತವಾಗಿ ವಿಧೇಯಕವನ್ನು ಮಂಡಿಸಲು ಸರ್ಕಾರ ನಿರ್ಧರಿಸಿದೆ.ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ವಿಶ್ವಾಸ್‌ ವಸಂತ್‌ ವೈದ್ಯ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದ್ಯಕ್ಕೆ ಮುಜರಾಯಿ ಇಲಾಖೆಯಲ್ಲಿ ಇಂತಹ ನೇಮಕಾತಿಗೆ ಕಾನೂನಿನಲ್ಲಿ ಅವಕಾಶವಿಲ್ಲ. ಸರ್ಕಾರದ ಈ ಕ್ರಮದಿಂದಾಗಿ ದೇವಸ್ಥಾನಗಳಲ್ಲಿ ಕೆಲಸ ಮಾಡುವ ನೂರಾರು ಕುಟುಂಬಗಳಿಗೆ ಆರ್ಥಿಕ ಭದ್ರತೆ ಸಿಗಲಿದೆ. ಇತರೆ ಸರ್ಕಾರಿ ಇಲಾಖೆಗಳಲ್ಲಿ ಚಾಲ್ತಿಯಲ್ಲಿರುವಂತೆ ಮುಜರಾಯಿ ಇಲಾಖೆಯಲ್ಲೂ ಈ ನೇಮಕಾತಿ ಪ್ರಕ್ರಿಯೆಯನ್ನು ಜಾರಿಗೆ ತರಲು ಕಾನೂನು ತಿದ್ದುಪಡಿ ಮಾಡಲಾಗುತ್ತಿದೆ. ಈ ಕುರಿತು ಶೀಘ್ರದಲ್ಲೇ ವಿಧೇಯಕ ಮಂಡಿಸಲಾಗುವುದು ಎಂದು ಧಾರ್ಮಿಕ ದತ್ತಿ ಸಚಿವ ರಾಮಲಿಂಗಾರೆಡ್ಡಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಈ ಕ್ರಮದಿಂದಾಗಿ ವರ್ಷಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದ ದೇವಸ್ಥಾನದ ನೌಕರರ ಕುಟುಂಬಗಳಿಗೆ ದೊಡ್ಡ ಮಟ್ಟದ ಸಾಮಾಜಿಕ ಭದ್ರತೆ ಸಿಗುವಂತಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular