ಬೆಂಗಳೂರು : ರಾಜ್ಯದ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮಧ್ಯಾಹ್ನದ ಬಿಸಿಯೂಟ ನೀಡಲು ಸರ್ಕಾರ ಚಿಂತನೆ ನಡೆಸಿದೆ.
ಹೌದು, ಸರ್ಕಾರ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡುತ್ತಿದ್ದು, ಅದೇ ತೆರನಾಗಿ ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ ನೀಡಲು ಚಿಂತನೆ ನಡೆಸಿದೆ. ಶೀಘ್ರವೇ ಸರ್ಕಾರ ಬಿಸಿಯೂಟ ನೀಡಲಿದೆ.ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರ ಕೈಗೊಳ್ಳಲು ಮುಂದಾಗಿದೆ.
ಶಾಲಾ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆಯನ್ನು ನೀಗಿಸುವುದು, ಶಾಲ içiನ ದಾಖಲಾತಿ ಮತ್ತು ಹಾಜರಾತಿಯನ್ನು ಸುಧಾರಿಸುವುದು. ಈ ಯೋಜನೆಯನ್ನು ಮೊದಲು ಕರ್ನಾಟಕದ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಈ ಯೋಜನೆಯಡಿಯಲ್ಲಿ ಸ್ಥಳೀಯ ಆಹಾರ ಪದ್ಧತಿಗೆ ಅನುಗುಣವಾಗಿ ಆಹಾರ ತಯಾರಿಸಲಾಗುತ್ತದೆ ಮತ್ತು ವಾರದಲ್ಲಿ ಎರಡು ದಿನ ಮೊಟ್ಟೆ ಅಥವಾ ಬಾಳೆಹಣ್ಣು ನೀಡಲಾಗುತ್ತದೆ.
