ಬೆಂಗಳೂರು : ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ವೇತನ ವೇತನೇತರ ದಿನಗೂಲಿ ನೌಕರರ/ಉಪದಾನ ಹೊರಗುತ್ತಿಗೆ ನೌಕರರ ವೇತನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಹೆಚ್ಚುವರಿ ಅನುದನವನ್ನು ಬಿಡುಗಡೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ವೇತನ, ವೇತನೇತರ, ದಿನಗೂಲಿ ನೌಕರರ ವೇತನ/ಉಪದಾನ, ಹೊರಗುತ್ತಿಗೆ ನೌಕರರ ವೇತನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಹೆಚ್ಚುವರಿ ಅನುದಾನವನ್ನು ಪ್ರಧಾನ ಲೆಕ್ಕ ಶೀರ್ಷಿಕೆ 2202, 2210, 2225, 2403, 2435 ಮತ್ತು 2515ರಡಿ ಬಿಡುಗಡೆಗೊಳಿಸಲು ಪ್ರಸ್ತಾಪಿಸಿದೆ.ಪ್ರಸ್ತಾವನೆಯನ್ನು ಪರಿಶೀಲಿಸಿ, ತಾಲ್ಲೂಕು ಪಂಚಾಯತ್ ಕಾರ್ಯಕ್ರಮದಡಿ ರೂ.1670.16ಲಕ್ಷಗಳನ್ನು ಲೆಕ್ಕ ಶೀರ್ಷಿಕೆ 2515-00-197-1-10-300ರಿಂದ ಬಿಡುಗಡೆಗೊಳಿಸಲು ನಿರ್ಣಯಿಸಿ ಈ ಕೆಳಕಂಡಂತೆ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದ ಕಾಲಂ 2ರ ತಾಲ್ಲೂಕು ಪಂಚಾಯತಿಗೆ ಕಾಲಂ 3 ಕಾರ್ಯಕ್ರಮದಡಿ ವೇತನ, ವೇತನೇತರ, ದಿನಗೂಲಿ ನೌಕರರ ವೇತನ/ಉಪದಾನ, ಹೊರಗುತ್ತಿಗೆ ನೌಕರರ ವೇತನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಅಗತ್ಯವಿರುವ ಅನುದಾನವನ್ನು ಕಾಲಂ 4ರ ಲೆಕ್ಕ ಶೀರ್ಷಿಕೆಯಡಿ ರೂ.1670.16ಲಕ್ಷ (ರೂಪಾಯಿ ಒಂದು ಸಾವಿರದ ಆರು ನೂರ ಎಪ್ಪತ್ತು ಲಕ್ಷದ ಹದಿನಾರು ಸಾವಿರಗಳು ಮಾತ್ರ) ಗಳನ್ನು ಬಿಡುಗಡೆಗೊಳಿಸಿದೆ.
ಅದೇ ರೀತಿ ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದ ಕಾಲಂ 2ರ ಜಿಲ್ಲಾ ಪಂಚಾಯತಿಗಳಿಗೆ ಕಾಲಂ 3 ಕಾರ್ಯಕ್ರಮದಡಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಅಧಿಕಾರಿ/ಸಿಬ್ಬಂದಿಯವರ ವೇತನ, ವೇತನೇತರ, ದಿನಗೂಲಿ ನೌಕರರ / ಹೊರಗುತ್ತಿಗೆ ನೌಕರರ ವೇತನ, ಕೋವಿಡ್-19 ಪರಿಹಾರ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಅನುದಾನವನ್ನು ಕಾಲಂ 4ರ ಲೆಕ್ಕ ಶೀರ್ಷಿಕೆಯಡಿ ರೂ.1093.56ಲಕ್ಷ (ರೂಪಾಯಿ ಒಂದು ಸಾವಿರದ ತೊಂಬತ್ತಮೂರು ಲಕ್ಷದ ಐವತ್ತಾರು ಸಾವಿರಗಳು ಮಾತ್ರ) ಗಳನ್ನು ಬಿಡುಗಡೆಗೊಳಿಸಿದೆ.









