ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ; ವಸತಿ ಸಹಿತ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಚರ್ಮಗಾರಿಕೆಯಲ್ಲಿ ತೊಡಗಿರುವ ಕುಟುಂಬಗಳ ಯುವ ಜನರಿಗೆ (ಪರಿಶಿಷ್ಟ ಜಾತಿಯಡಿ ಬರುವ ಮಾದಿಗ, ಸಮಗಾರ, ಡೋರ, ಆದಿ ಜಾಂಬವ, ಮಚಗಾರ, ಮೋಚಿ ಹಾಗೂ ಇತರೆ ಚರ್ಮಗಾರಿಕೆಗೆ ಒಳಪಡುವ ಸಮುದಾಯಗಳಿಗೆ) ಯುವಕ ಮತ್ತು ಯುವತಿಯರಿಂದ 60 ದಿನಗಳ ವಸತಿ ಸಹಿತ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸ್ತುತ ಚರ್ಮ ಉದ್ಯಮದಲ್ಲಿ ಚಾಲ್ತಿಯಲ್ಲಿರುವ ಹೊಸ ತಂತ್ರಜ್ಞಾನಗಳು, ವಿನ್ಯಾಸಗಳು ಹಾಗೂ ಮಾರುಕಟ್ಟೆಯ ಬೇಡಿಕೆಗಳನ್ನು ಪರಿಚಯಿಸಲು ಚರ್ಮ ಆಧಾರಿತ ಕೈಗಾರಿಕೆಗಳಲ್ಲಿ ಮುಂಚೂಣಿಯಲ್ಲಿರುವ ಆಗ್ರಾ, ಉತ್ತರಪ್ರದೇಶ, ಕೊಲ್ಕತ್ತ ಹಾಗೂ ಪಶ್ಚಿಮ ಬಂಗಾಳದ ರಾಜ್ಯಗಳಲ್ಲಿರುವ ಮೆ.ಸೆಂಟ್ರಲ್ ಪುಟ್ ವೇರ್ ಟ್ರೆನಿಂಗ್ ಇನ್ಸ್ಟಿಟ್ಯೂಟ್ ಸೆಂಟರ್ ಇಲ್ಲಿ “ಫುಟ್ವೇರ್ ಡಿಸೈನಿಂಗ್ ಅಂಡ್ ಪ್ರೊಡಕ್ಷನ್” ತರಬೇತಿ ಪಡೆಯಲು ಕಳುಹಿಸಿಕೊಡಲಾಗುತ್ತದೆ. ತರಬೇತಿ ಹೊಂದಲು ಆಸಕ್ತಿ ಇರುವ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

*ಅರ್ಹತೆ
ವಯೋಮಿತಿ 18 ರಿಂದ 40 ವರ್ಷ ತುಂಬಿರಬೇಕು. ಕನಿಷ್ಠ ವಿದ್ಯಾರ್ಹತೆ 10ನೇ ತರಗತಿ ತೇರ್ಗಡೆ ಹೊಂದಿರಬೇಕು.

*ಬೇಕಾದ ದಾಖಲೆ

ವೈಯಕ್ತಿಕ ವಿವರ, 10 ನೇ ತರಗತಿಯಲ್ಲಿ ತೇರ್ಗಡೆ ಹೊಂದಿರುವ ಅಂಕಪಟ್ಟಿ., ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಮೊದಲನೇ ಪ್ರತಿ ಹಾಗೂ 05 ಪಾಸ್ ಫೋಟೋ.
ಅರ್ಜಿ ಸಲ್ಲಿಸಲು ಆಗಸ್ಟ್ 05 ಕೊನೆಯ ದಿನವಾಗಿರುತ್ತದೆ.

ಅರ್ಜಿಗಳನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆಯನ್ನು ಮೋತಿ ವೃತ್ತದ ಬಳಿಯ ಬುಡಾ ಕಾಂಪ್ಲೆಕ್ಸ್ನ ಶಾಪ್ ನಂ.24, ಗ್ರೌಂಡ್ ಪ್ಲೋರ್ನ ಲಿಡ್ಕರ್ ಲೆದರ್ ಎಂಪೋರಿಯA ಮಳಿಗೆಯಲ್ಲಿ ಪಡೆದು ಭರ್ತಿ ಮಾಡಿ, ಇಲ್ಲಿಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ದೂ.08392-271741 ಹಾಗೂ ಮೊ.8660667128, 9844667691 ಗೆ ಸಂಪರ್ಕಿಸಬಹುದು ಎಂದು ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಜಿಲ್ಲಾ ಸಂಯೋಜಕ ಟಿ.ಸಂಜೀವಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read