HomeLatest Newsನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : CCTV ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : CCTV ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ್ 15 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಸ್ವಯಂ ಉದ್ಯೋಗಿಗಳಾಗಲು ಇಚ್ಛಿಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಡಿಸೆಂಬರ್ 04, 2025 ರಂದು ಬೆಳಿಗ್ಗೆ 09.30 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ಸೂಕ್ತ ದಾಖಲಾತಿಗಳೊಂದಿಗೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8970476050, 9591514754, 9686248369 ಮತ್ತು 9505894247 ಗೆ ಸಂಪರ್ಕಿಸಬಹುದು ಎಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular