HomeLatest Newsನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಕುರಿ, ಕೋಳಿ, ಹಸು ಸಾಕಾಣಿಕೆ ನೇರ ತರಬೇತಿಗೆ ಅರ್ಜಿ ಆಹ್ವಾನ

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಕುರಿ, ಕೋಳಿ, ಹಸು ಸಾಕಾಣಿಕೆ ನೇರ ತರಬೇತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ ರುಡ್‍ಸೆಟ್ ಸಂಸ್ಥೆಯಲ್ಲಿ ನಿರುದ್ಯೋಗಿ ಗ್ರಾಮೀಣ ಭಾಗದ ಯುವಕ-ಯುವತಿಯರಿಗಾಗಿ ಸ್ವ ಉದ್ಯೋಗ ಮಾಡಲು ಕುರಿ, ಕೋಳಿ ಮತ್ತು ಹಸು ಸಾಕಾಣಿಕೆ ತರಬೇತಿಯನ್ನು ಇದೇ ಜೂನ್ 20 ರಿಂದ ಪ್ರಾರಂಭಿಸಲಾಗುವುದು. ಆಸಕ್ತರು ನೇರವಾಗಿ ತರಬೇತಿಗೆ ಹಾಜರಾಗಲು ತಿಳಿಸಲಾಗಿದೆ.

ಕುರಿ, ಕೋಳಿ ಮತ್ತು ಹಸು ಸಾಕಾಣಿಕೆ ಕುರಿತು ಇದೇ ಜೂನ್ 20 ರಿಂದ ತರಬೇತಿ ಪ್ರಾರಂಭವಾಗಲಿದ್ದು, 13 ದಿನಗಳ ಕಾಲ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು 19 ರಿಂದ 45 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು. ಕನ್ನಡ ಓದಲು ಬರೆಯಲು ಬಲ್ಲವರಾಗಿರಬೇಕು. ತರಬೇತಿಗೆ ಸಂಬಂಧಿಸಿದಂತೆ ಪ್ರಾಥಮಿಕ ಜ್ಞಾನ ಹೊಂದಿರಬೇಕು. ಉದ್ಯೋಗವನ್ನು ಮಾಡಬೇಕು ಎಂಬ ಆಸಕ್ತಿ ಹೊಂದಿರಬೇಕು. ಈ ತರಬೇತಿಗೆ ಸಂಬಂಧಪಟ್ಟ ಕೌಶಲ್ಯ ತರಬೇತಿ ಪ್ರಾಥಮಿಕ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಊಟ ಮತ್ತು ವಸತಿ ಸಹಿತವಾಗಿ ಸಂಪೂರ್ಣ ಉಚಿತವಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಮೊಬೈಲ್ ನಂಬರ್‍ವುಳ್ಳ ಸ್ವವಿಳಾಸದ ಅರ್ಜಿಯೊಂದಿಗೆ 4 ಪಾಸ್‍ಪೋರ್ಟ್ ಸೈಜ್‍ಫೋಟೋಗಳು, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್ ಎರಡು ಪ್ರತಿಗಳೊಂದಿಗೆ ರುಡ್‍ಸೆಟ್ ಸಂಸ್ಥೆಗೆ ನೇರವಾಗಿ ಬಂದು ತರಬೇತಿಗೆ ಹಾಜರಾಗಲು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ 8618282445, 9481778047, 9019299901, 8660627785 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular