HomeLatest Newsನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : 'ಫಾಸ್ಟ್ ಫುಡ್' ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ‘ಫಾಸ್ಟ್ ಫುಡ್’ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು  :   ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‍ ಮತ್ತು ಕೆನರಾ ಬ್ಯಾಂಕ್‍ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ ಸೆಟ್‍ ಸಂಸ್ಥೆಯ ಫಾಸ್ಟ್‍ ಫುಟ್‍ ತಯಾರಿಕೆ ಕುರಿತು 12 ದಿನಗಳ ಉಚಿತ ತರಬೇತಿಯನ್ನು ಫೆಬ್ರವರಿ 16, 2026 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ನಿರುದ್ಯೋಗಿ ಯುವಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್‍ ಕಾರ್ಡ್‍ ಹಾಗೂ ಆಧಾರ್‍ ಕಾರ್ಡ್‍ ಅನ್ನು ಕಡ್ಡಾಯವಾಗಿ ಹೊಂದಿರಬೇಕು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‍ ಸೆಟ್‍ ಸಂಸ್ಥೆ, ಅರಿಶಿನಕುಂಟೆ , ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್‍ ಸಂಖ್ಯೆ : 9481506564, 9740982585, 9380162042, 9241482541, 9113880324 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಶಾಖೆ, ರುಡ್‍ ಸೆಟ್‍ ಸಂಸ್ಥೆಧಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕ ಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಯಲಿದೆ.

ಆಸಕ್ತರು ಜನವರಿ 17, 2026ರೊಳಗಾಗಿ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ದೂರವಾಣಿ ಸಂಖ್ಯೆ 0821-2515944 ಮೂಲಕ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು ಕರಾಮುವಿ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular