HomeLatest Newsನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : 'ಮೊಬೈಲ್ ಕ್ಯಾಂಟೀನ್' ತೆರೆಯಲು 5 ಲಕ್ಷ ಸಹಾಯಧನಕ್ಕೆ ಅರ್ಜಿ ಆಹ್ವಾನ

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ‘ಮೊಬೈಲ್ ಕ್ಯಾಂಟೀನ್’ ತೆರೆಯಲು 5 ಲಕ್ಷ ಸಹಾಯಧನಕ್ಕೆ ಅರ್ಜಿ ಆಹ್ವಾನ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆಯು 2025-26ನೇ ಸಾಲಿನ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ಖರೀದಿಸಲು 5 ಲಕ್ಷ ರೂಪಾಯಿಗಳ ಸಹಾಯಧನ ನೀಡಲಾಗುವುದು.

ಅರ್ಹತೆಗಳೇನು?

  • ವಿದ್ಯಾರ್ಹತೆ: ಕಡ್ಡಾಯವಾಗಿ ಎಸ್‌ಎಸ್‌ಎಲ್‌ಸಿ (SSLC) ಉತ್ತೀರ್ಣರಾಗಿರಬೇಕು.
  • ವಯೋಮಿತಿ: 20 ರಿಂದ 55 ವರ್ಷದೊಳಗಿರಬೇಕು.
  • ಇತರೆ: ಅರ್ಜಿದಾರರು ಚಾಲ್ತಿಯಲ್ಲಿರುವ ವಾಹನ ಚಾಲನಾ ಪರವಾನಗಿ (Driving License) ಹೊಂದಿರಬೇಕು.

ತರಬೇತಿ ಮತ್ತು ಗುರಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕಾಲ ಉದ್ಯಮಶೀಲತೆ ವಿಷಯದ ಬಗ್ಗೆ ವಿಶೇಷ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ಚಿತ್ರದುರ್ಗ ಜಿಲ್ಲೆಗೆ ಒಟ್ಟು 10 ಅಭ್ಯರ್ಥಿಗಳ ಗುರಿ ನಿಗದಿಪಡಿಸಲಾಗಿದ್ದು, ಇದರಲ್ಲಿ ಪರಿಶಿಷ್ಟ ಜಾತಿಯ 6 ಹಾಗೂ ಪರಿಶಿಷ್ಟ ಪಂಗಡದ 4 ಅಭ್ಯರ್ಥಿಗಳಿಗೆ ಅವಕಾಶವಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತರು ಫೆಬ್ರವರಿ 23 ರಿಂದ ಅರ್ಜಿಗಳನ್ನು ಪಡೆಯಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 13ರ ಸಂಜೆ 4.30ರ ಒಳಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ: ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಕಾಮನಭಾವಿ ಬಡಾವಣೆ, ಚಿತ್ರದುರ್ಗ. ಇವರ ಕಚೇರಿಗೆ ದ್ವಿ-ಪ್ರತಿಯಲ್ಲಿ (Two Copies) ಅರ್ಜಿಗಳನ್ನು ಸಲ್ಲಿಸತಕ್ಕದ್ದು. ನಿಗದಿತ ಸಮಯದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular