HomeLatest Newsನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಉಚಿತ ಊಟ, ವಸತಿ ಸಹಿತ ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಉಚಿತ ಊಟ, ವಸತಿ ಸಹಿತ ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ಕೊಪ್ಪಳ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ (ರಿ), ಹಳಿಯಾಳ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ 30 ದಿನಗಳ ಉಚಿತ ಸೋಲಾರ ಟೆಕ್ನೀಷಿಯನ್, ಜೆಸಿಬಿ ಆಪರೇಟರ್, ಇಲೆಕ್ಟ್ರೀಕ್ ವೇಹಿಕಲ್ ಸರ್ವಿಸಿಂಗ್, ಕಾರು ಚಾಲನೆ ಮತ್ತು ರೆಪ್ರೀಜರೇಷನ್, ಏರ್ ಕಂಡಿಷನಿಂಗ್ ತರಬೇತಿಗಳು ಪ್ರಾರಂಭವಾಗಲಿದ್ದು, ಅರ್ಜಿ ಆಹ್ವಾನಿಸಲಾಗಿದೆ.

 ‎ಈ ತರಬೇತಿಗಳು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಸ್ವಯಂ ಉದ್ಯೋಗ ಮಾಡಲು ಈ ತರಬೇತಿಯು ಅನುಕೂಲವಾಗಲಿದ್ದು, ಸ್ವ ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿದೆ. 18 ರಿಂದ 50 ವಯಸ್ಸಿನ ಒಳಗಿರುವ ಗ್ರಾಮೀಣ ಭಾಗದ ಆಸಕ್ತ ನಿರುದ್ಯೋಗಿ ಯುವಕ, ಯುವತಿಯರು ಏಪ್ರಿಲ್ 30 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.

 ಈ ತರಬೇತಿಯಲ್ಲಿ ಕೌಶಲ್ಯ, ಸಾಧನಾ ಪ್ರೇರಣಾ ತರಬೇತಿ, ಉದ್ಯಮಶಿಲತೆಯ ದಕ್ಷ ಗುಣಗಳು, ಹೊಸ ಉದ್ಯಮದ ಸ್ಥಾಪನೆ ಬಗ್ಗೆ ಮಾಹಿತಿ, ಮಾರುಕಟ್ಟೆ ಸಮೀಕ್ಷೆ, ಮಾರಾಟದ ತಂತ್ರಗಳು, ಯಶಸ್ವಿ ಉದ್ಯಮಗಳಿಂದ ಅನುಭವ ಹಂಚಿಕೆ, ಕ್ಷೇತ್ರ ಭೇಟಿ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ‎ತರಬೇತಿಯಲ್ಲಿ ಭಾಗವಹಿಸಲಿಚ್ಛಿಸುವವರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಂಪರ್ಕಿಸಲು ಹಾಗೂ ಸಂಸ್ಥೆಯ ವಾಟ್ಸಾಪ್ ನಂಬರಗೆ 9483485489 ಗೆ `ಹಾಯ್’ ಎಂದು ಸಂದೇಶ ಕಳುಹಿಸುವುದರ ಮುಖಾಂತರ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ: 7204105812, 9482188780 ಗೆ ಸಂಪರ್ಕಿಸುವಂತೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular