HomeIndiaರಾಜ್ಯ ಸರ್ಕಾರದಿಂದ 'ವಾಲ್ಮೀಕಿ' ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದಿಂದ ‘ವಾಲ್ಮೀಕಿ’ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಗಳಿಗಾಗಿ ಪರಿಶಿಷ್ಟ ಪಂಗಡದ ಸಮುದಾಯ ಜನಾಂಗದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಬೆಂಗಳೂರು ಓನ್, ಕರ್ನಾಟಕ ಓನ್, ಗ್ರಾಮ ಓನ್ ಸೆಂಟರ್‌ಗಳ ಮೂಲಕ (https://sevasindhuservices.karnataka.gov.in) ಗೆ ಭೇಟಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನ.23 ಕೊನೆಯ ದಿನವಾಗಿದೆ.

ಯೋಜನೆಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೇರಸಾಲ ಯೋಜನೆ:
ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಘಟಕವೆಚ್ಚ ರೂ.1 ಲಕ್ಷ ಇದರಲ್ಲಿ ರೂ.50,000 ಸಹಾಯಧನ ಮತ್ತು ರೂ.50,000 ಸಾಲ)
ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ:
ವ್ಯಾಪಾರ ಮತ್ತು ಇತರೆ ಸಣ್ಣ ಉದ್ಯಮಗಳಿಗಾಗಿ ಘಟಕ ವೆಚ್ಚದ ಶೇ.70 ರಷ್ಟು ಅಥವಾ ಗರಿಷ್ಟ ರೂ.2 ಲಕ್ಷ ಸಹಾಯಧನ ಮತ್ತು ಉಳಿದ ಬ್ಯಾಂಕ್ ಸಾಲ.
ಸ್ವಾವಲಂಭಿ ಸಾರಥಿ:
ಸರಕು ವಾಹನ/ಟ್ಯಾಕ್ಸಿ ಉದ್ದೇಶಕ್ಕಾಗಿ ಘಟಕ ವೆಚ್ಚದ ಶೇ.75 ರಷ್ಟು ಅಥವಾ ಗರಿಷ್ಟ ರೂ.4 ಲಕ್ಷ ಸಹಾಯಧನ ಮತ್ತು ಉಳಿದ ಬ್ಯಾಂಕ್ ಸಾಲ/ಫಲಾನುಭವಿಯ ವಂತಿಕೆ.
ಮೈಕ್ರೋಕ್ರೆಡಿಟ್ (ಪ್ರೇರಣಾ) ಯೋಜನೆ:
ಮಹಿಳಾ ಸ್ವಸಹಾಯ ಸಂಘದ ಕನಿಷ್ಠ 10 ಜನ ಸದಸ್ಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಕಿರು ಆರ್ಥಿಕ ಚಟುವಟಿಕೆಗಳಿಗೆ ಘಟಕ ವೆಚ್ಚ ರೂ.2.50 ಲಕ್ಷ, ಇದರಲ್ಲಿ ರೂ.1.50 ಲಕ್ಷ ಸಹಾಯಧನ ಮತ್ತು ರೂ.1 ಲಕ್ಷ ನಿಗಮದಿಂದ ಸಾಲ ಕಲ್ಪಿಸಲಾಗುವುದು.

ಗಂಗಾ ಕಲ್ಯಾಣ ಯೋಜನೆ:
ಸಣ್ಣ ಮತ್ತು ಅತಿ ಸಣ್ಣ ರೈತರು ಹೊಂದಿರುವ ಖುಷ್ಕಿ, ಒಣ ಜಮೀನಿನಲ್ಲಿ ಕೊಳವೆಬಾವಿ ಕೊರೆಸಿ, ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. ಈ ಯೋಜನೆಗೆ ಘಟಕವೆಚ್ಚ ರೂ.3.75 ಲಕ್ಷ (ರೂ.50,000 ಸಾಲ ಒಳಗೊಂಡಂತೆ).ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಂಪರ್ಕಿಸಬಹುದು ಎಂದು ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular