HomeLatest NewsGOOD NEWS : ರಾಜ್ಯ ಸರ್ಕಾರದಿಂದ 'ವಿಶ್ವಕರ್ಮ' ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ...

GOOD NEWS : ರಾಜ್ಯ ಸರ್ಕಾರದಿಂದ ‘ವಿಶ್ವಕರ್ಮ’ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಡಿಜಿಟಲ್ ಡೆಸ್ಕ್ : ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯಕ್ಕಾಗಿ ಆನ್ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆ:
ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.

ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ.3.50 ಲಕ್ಷ ಒಳಗಿರಬೇಕು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿಸಿರಬೇಕು.
ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98 ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ.1.20 ಲಕ್ಷ ಮಿತಿಯೊಳಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ಮೀಸಲಾತಿ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಗಮದ ಯೋಜನೆಗಳ ವಿವರ
ಪಂಚವೃತ್ತಿ ಅಭಿವೃದ್ದಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು) ಮತ್ತು (ನವೀಕರಣ), ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕ್ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ (ಈ ಯೋಜನೆಯಡಿ ವಾರ್ಷಿಕ ವರಮಾನವು ರೂ.15 ಲಕ್ಷಗಳ ಮಿತಿಯಲ್ಲಿರಬೇಕು), ಸ್ವಾತಂತ್ರö್ಯ ಅಮೃತ ಮುನ್ನಡೆ ಯೋಜನೆ(ಈ ಯೋಜನೆಯಡಿ ಅರ್ಜಿ www.kaushalkar.com ನಲ್ಲಿ ಸಲ್ಲಿಸಬೇಕು).

ಅರ್ಜಿದಾರರು ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು(ಶ್ರೀ/ಶ್ರೀಮತಿ/ಕುಮಾರಿ ಮುಂತಾದ ಮಾಹಿತಿ).ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಸೇವಾಸಿಂಧು ಪೋರ್ಟಲ್ನಡಿ ಅರ್ಜಿ ಸಲ್ಲಿಸಬಹುದು.

ವಿಶೇಷ ಸೂಚನೆ: 2023-24 ಹಾಗೂ 2024-25ನೇ ಸಾಲಿನಲ್ಲಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಅರ್ಜಿದಾರರು ಮತ್ತೊಮ್ಮೆ ಬೇರೆ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 02 ಕೊನೆಯ ದಿನವಾಗಿದೆ (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ).

ಮಾಹಿತಿಗಾಗಿ ನಿಗಮದ ವೆಬ್ಸೈಟ್ https://kvcdcl.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿಯ ದೂ.080-22374848, ಮೊ.7899899039 ಗೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನ ಕಚೇರಿಯ ಎರಡನೇ ಮಹಡಿಯ ಬಿ ಬ್ಲಾಕ್ ನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ:08392-267038 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ.ಹೊನ್ನುರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular