ಬೆಂಗಳೂರು: ಶ್ರಾವಣ ಶುಕ್ರವಾರದ ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಪಾವತಿಯಾಗಲಿದೆ ಎಂದು ಹೇಳಲಾಗಿದೆ.
2025- 26 ನೇ ಸಾಲಿನ ಮೂರನೇ ಕಂತಿನ ಎರಡು ಸಾವಿರ ರೂಪಾಯಿಯನ್ನು ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಎರಡು ಮೂರು ದಿನದಲ್ಲಿ ಜಮಾ ಮಾಡಲಾಗುವುದು. ರಾಜ್ಯದ 1.24 ಕೋಟಿ ಮಹಿಳೆಯರ ಖಾತೆಗೆ ಮೂರನೇ ಕಂತಿನ ಹಣ ಜಮಾ ಆಗಲಿದ್ದು, ನಾಲ್ಕು ಮತ್ತು ಐದನೇ ಕಂತಿನ ಹಣ ಬಾಕಿ ಉಳಿಯಲಿದೆ.
ಆಯಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಖಾತೆಗೆ ಹಣ ಸಂದಾಯವಾಗುತ್ತಿದ್ದು, ನಂತರ ತಾಲೂಕು ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳಿಂದ ಡಿಬಿಟಿ ಮೂಲಕ ಫಲಾನುಭವಿಗಳಿಗೆ ನೇರವಾಗಿ ಹಣ ಸಂದಾಯವಾಗಲಿದೆ ಎನ್ನಲಾಗಿದೆ.