HomeKarnatakaಹೊಸ ʻರೇಷನ್‌ ಕಾರ್ಡ್‌́ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್‌ ನ್ಯೂಸ್ : ಏಪ್ರಿಲ್‌ 1 ರಿಂದ ʻAPL-BPLʼ...

ಹೊಸ ʻರೇಷನ್‌ ಕಾರ್ಡ್‌́ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್‌ ನ್ಯೂಸ್ : ಏಪ್ರಿಲ್‌ 1 ರಿಂದ ʻAPL-BPLʼ ಕಾರ್ಡ್‌ ವಿತರಣೆ

ಬೆಂಗಳೂರು : ಹೊಸ ಎಪಿಎಲ್‌, ಬಿಪಿಎಲ್‌ ರೇಷನ್‌  ಕಾರ್ಡ್‌ ವಿತರಣೆ ಸಂಬಂಧ ಆಹಾರ ಮತ್ತು ನಾಗರಿಕ ಸಚಿವ ಕೆ.ಹೆಚ್.ಮುನಿಯಪ್ಪ ಸಿಹಿಸುದ್ದಿ ನೀಡಿದ್ದು, ಏಪ್ರಿಲ್‌ 1 ರಿಂದ ಕಾರ್ಡ್‌ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

ಹೊಸ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿ ವಿವರಣೆ ಕುರಿತು ಸದನದಲ್ಲಿ ವಿಪಕ್ಷ ನಾಯಕ ಆರ್.‌ ಅಶೋಕ್ ಪ್ರಶ್ನೆಗೆ ಉತ್ತರಿಸಿದ ಸಚಿವ ಕೆ.ಎಚ್.ಮುನಿಯಪ್ಪ, ಪ್ರಸ್ತುತ ಸದ್ಯಕ್ಕೆ ಸ್ಥಗಿತವಾಗಿರುವ ಬಿಪಿಎಲ್ ಕಾರ್ಡ್ ವಿತರಣೆ ಪ್ರಕ್ರಿಯೆ ಪುನಃ 1 ಏಪ್ರಿಲ್ 2024 ರಿಂದ ಪ್ರಾರಂಭವಾಗಲಿದೆ ವಿಧಾನಸಭೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಇದೇ ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular