ಬೆಂಗಳೂರು: ಹೊಸ ವರ್ಷಾಚರಣೆಯಲ್ಲಿ ಪಾಲ್ಗೊಳ್ಳುವವರ ಅನುಕೂಲಕ್ಕಾಗಿ ಡಿಸೆಂಬರ್ 31 ರಂದು ತಡರಾತ್ರಿವರೆಗೆ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಬಸ್ ಸೇವೆ ನೀಡಲು ಬಿಎಂಟಿಸಿ ಕ್ರಮ ಕೈಗೊಂಡಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಬ್ರಿಗೇಡ್ ರಸ್ತೆ, ಎಂಜಿ ರಸ್ತೆ, ಸರ್ವಜ್ಞ ನಗರದ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ, ಮೆಜೆಸ್ಟಿಕ್ ನ ಕೆಂಪೇಗೌಡ ಬಸ್ ನಿಲ್ದಾಣದಿಂದ ವಿವಿಧ ಕಡೆಗಳಿಗೆ ರಾತ್ರಿ 11 ಗಂಟೆಯಿಂದ ತಡರಾತ್ರಿ 2 ಗಂಟೆಯವರೆಗೆ 70 ಬಸ್ ಗಳು ಸೇವೆ ನೀಡಲಿವೆ.
ಈ ಬಸ್ ಗಳು ಎಲೆಕ್ಟ್ರಾನಿಕ್ ಸಿಟಿ, ಜಿಗಣಿ, ಸರ್ಜಾಪುರ, ಕೆಂಗೇರಿ, ನೆಲಮಂಗಲ, ಯಲಹಂಕ, ಹೊಸಕೋಟೆ, ಬನಶಂಕರಿ, ಸಿಲ್ಕ್ ಬೋರ್ಡ್, ಕೋರಮಂಗಲ ಸೇರಿದಂತೆ ಇತರೆ ಪ್ರದೇಶಗಳಿಗೆ ಸಂಚರಿಸಲಿವೆ ಎಂದು ಹೇಳಲಾಗಿದೆ.

