ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : ‘KSRTC’ ಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು : ಕ್ರಿಸ್ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ KSRTC ಗುಡ್ ನ್ಯೂಸ್ ನೀಡಿದ್ದು, ಪ್ರಯಾಣಿಕರಿಗೆ ತೊಂದರೆ ಆಗದಂತೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ.

ಇಂದಿನಿಂದ ಡಿ.25 ರವರೆಗೆ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್ಗಳು ತೆರಳಲಿದೆ.ಪ್ರಯಾಣಿಕರು ಮೊದಲೇ ಸೀಟು ರಿಸರ್ವ್ ಮಾಡಬಹುದಾಗಿದ್ದು, ಇ-ಟಿಕೆಟ್ ವೆಬ್ ಸೈಟ್ ಮೂಲಕ ಪಡೆಯಬಹುದು. ನಾಲ್ಕು ಅಥವಾ ನಾಲ್ಕಕ್ಕಿಂತ ಹೆಚ್ಚಿನ ಟಿಕೆಟ್ ಕಾಯ್ದಿರಿಸಿದರೆ, 5 % ರಿಯಾಯಿತಿ ಸಿಗುತ್ತದೆ ಹೋಗುವ ಹಾಗೂ ಬರುವ ಟಿಕೆಟ್ ಕಾಯ್ದಿರಿಸಿದರೆ ಬರೊಬ್ಬರಿ 10% ರಿಯಾಯಿತಿ ಸಿಗಲಿದೆ. ಪ್ರಯಾಣಿಕರು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಕ್ರಿಸ್ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಯಾವುದೇ ತೊಂದರೆ ಆಗದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹೆಚ್ಚುವರಿ ಬಸ್ ಸೌಲಭ್ಯ ನೀಡಿದೆ. ಹೆಚ್ಚಿನ ಮಾಹಿತಿಗಾಗಿ ಕೆಎಸ್ ಆರ್ ಟಿಸಿ ವಿಭಾಗವನ್ನು ಸಂಪರ್ಕಿಸಬಹುದಾಗಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read