HomeKarnatakaಸಾಲು ಸಾಲು ರಜೆ ಹಿನ್ನೆಲೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಯುಗಾದಿ, ರಂಜಾನ್ ಗೆ ಕೆಎಸ್ಆರ್ಟಿಸಿ...

ಸಾಲು ಸಾಲು ರಜೆ ಹಿನ್ನೆಲೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಯುಗಾದಿ, ರಂಜಾನ್ ಗೆ ಕೆಎಸ್ಆರ್ಟಿಸಿ 2 ಸಾವಿರ ವಿಶೇಷ ಬಸ್

ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಮಾರ್ಚ್ 18ರಿಂದ ಎರಡು ಸಾವಿರ ವಿಶೇಷ ಹೆಚ್ಚುವರಿ ಬಸ್ ಗಳ ಕಾರ್ಯಾಚರಣೆ ನಡೆಸಲಿದೆ.

ಮಾರ್ಚ್ 18ರಿಂದ 20ರವರೆಗೆ ಹೆಚ್ಚುವರಿ ಬಸ್ ಗಳು ಬೆಂಗಳೂರಿನಿಂದ ರಾಜ್ಯದ ಮತ್ತು ಹೊರ ರಾಜ್ಯಗಳ ವಿವಿಧ ನಗರಗಳಿಗೆ ಸೇವೆ ನೀಡಲಿವೆ. ಮಾರ್ಚ್ 22 ರಂದು ಆ ಬಸ್ ಗಳು ವಿವಿಧ ನಗರಗಳಿಂದ ಬೆಂಗಳೂರಿಗೆ ವಾಪಸ್ ಕಾರ್ಯಾಚರಣೆ ನಡೆಸಲಿವೆ.

ಶಿವಮೊಗ್ಗ, ಹಾಸನ, ಧರ್ಮಸ್ಥಳ, ಮಂಗಳೂರು, ಶೃಂಗೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ರಾಯಚೂರು, ಬಳ್ಳಾರಿ, ಕಲಬುರಗಿ, ತಿರುಪತಿ, ವಿಜಯವಾಡ, ಹೈದರಾಬದ್ ನಗರಗಳಿಗೆ ಕೆಂಪೇಗೌಡ ಬಸ್ ನಿಲ್ದಾಣದಿಂದ ವಿಶೇಷ ಹೆಚ್ಚುವರಿ ಬಸ್ ಗಳು ತೆರಳಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೈಸೂರು, ಮಡಿಕೇರಿ ಮಾರ್ಗದ ಬಸ್ ಗಳು ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಸಂಚರಿಸಲಿವೆ. ಈ ಬಸ್ ಗಳಲ್ಲಿ ಪ್ರಯಾಣಿಸಲು www.ksrtc.karnataka.gov.in ವೆಬ್ಸೈಟ್ ನಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸಬಹುದಾಗಿದೆ. ನಾಲ್ಕು ಅಥವಾ ಅದಕ್ಕಿಂತ ಹೆಚ್ಚಿನ ಪ್ರಯಾಣಿಕರು ಒಟ್ಟಿಗೆ ಟಿಕೆಟ್ ಕಾಯ್ದಿರಿಸಿದರೆ ಪ್ರಯಾಣ ದರದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುವುದು. ವಾಪಸ್ ಬರುವ ಟಿಕೆಟ್ ಒಟ್ಟಿಗೆ ಕಾಯ್ದಿರಿಸಿದರೆ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular