GOOD NEWS : ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : ಬೆಂಗಳೂರಿನಿಂದ 1,500 ಹೆಚ್ಚುವರಿ ‘KSRTC’ ಬಸ್ ಸಂಚಾರ

ಬೆಂಗಳೂರು :   ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ 1,500 ಹೆಚ್ಚುವರಿ ಬಸ್‌ಗಳನ್ನು ರಸ್ತೆಗಿಳಿಸಲಿದೆ. ಆಗಸ್ಟ್‌ 25 ಮತ್ತು 26ರಂದು ಬೆಂಗಳೂರಿನಿಂದ ವಿಶೇಷ ಬಸ್‌ ಸೇವೆ ಇರಲಿದೆ.

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಕೆಎಸ್ ಆರ್ ಟಿಸಿ (KSRTC) ಬೆಂಗಳೂರಿನಿಂದ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಿದೆ.

ಹೌದು. ಗೌರಿ ಗಣೇಶ ಹಬ್ಬದ ಹಿನ್ನೆಲೆ ಬೆಂಗಳೂರಿನಿಂದ ರಾಜ್ಯದ ವಿವಿಧ ಕಡೆ ತೆರಳುವ ಪ್ರಯಾಣಿಕರಿಗಾಗಿ ಕೆಎಸ್ ಆರ್ ಟಿಸಿ 1500 ವಿಶೇಷ ಬಸ್ ಸೇವೆಗಳನ್ನು ಆರಂಭಿಸುವುದಾಗಿ ತಿಳಿಸಿದೆ.

ಬಸ್ ಗಳಿಗೆ ಪ್ರಯಾಣಿಕರು www.ksrtc.karnataka.gov.in ನಲ್ಲಿ ಮುಂಗಡವಾಗಿ ಟಿಕೆಟ್ ಬುಕ್ ಮಾಡಿಕೊಳ್ಳಬಹುದು. ನಾಲ್ಕು ಅಥವಾ ಹೆಚ್ಚಿನ ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಿದರೆ ಶೇ 5 ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹಾಗೆ ಹೋಗುವ ಹಾಗೂ ಬರುವ ಪ್ರಯಾಣದ ಟಿಕೆಟ್ ನ್ನು ಒಟ್ಟಿಗೆ ಬುಕ್ ಮಾಡಿದರೆ ಟಿಕೆಟ್ ದರದಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read