HomeLatest Newsಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಆಧಾರ್ ಕಾರ್ಡ್ ಸೇರಿ ಅಗತ್ಯ ದಾಖಲೆ ಇದ್ದವರಿಗೆ ‘ಆತ್ಮನಿರ್ಭರ್ ನಿಧಿ’...

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಆಧಾರ್ ಕಾರ್ಡ್ ಸೇರಿ ಅಗತ್ಯ ದಾಖಲೆ ಇದ್ದವರಿಗೆ ‘ಆತ್ಮನಿರ್ಭರ್ ನಿಧಿ’ ಯೊಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ

ಬಳ್ಳಾರಿ ಮಹಾನಗರ ಪಾಲಿಕೆ ವತಿಯಿಂದ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ ಯೋಜನೆಯಡಿ ಬ್ಯಾಂಕ್‌ಗಳ ಮೂಲಕ ಸಾಲ ಸೌಲಭ್ಯಕ್ಕಾಗಿ ನಗರದ ಬೀದಿ ಬದಿ ವ್ಯಾಪಾರಸ್ಥರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೇಕಾದ ದಾಖಲೆ: 

ಅರ್ಜಿದಾರರ ಆಧಾರ್ ಕಾರ್ಡ್, ಬೀದಿ ಬದಿ ವ್ಯಾಪಾರಸ್ಥರ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ, 2 ಪಾಸ್‌ಪೋರ್ಟ್ ಭಾವಚಿತ್ರ, ವ್ಯಾಪಾರ ಮಾಡುವ ಭಾವಚಿತ್ರ, ರೇಷನ್ ಕಾರ್ಡ್ ಇನ್ನಿತರೆ ದಾಖಲೆಗಳನ್ನು ಸಲ್ಲಿಸಬೇಕು. ಬೀದಿ ಬದಿ ವ್ಯಾಪಾರಸ್ಥರು ಪಿಎಮ್-ಸ್ವನಿಧಿ ಆನ್‌ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆಯ ವಲಯ ಕಛೇರಿ – 2 (ಹಳೇ ಕಚೆೆÃರಿ) ರ ಡೇ-ನಲ್ಮ್ ಶಾಖೆ ಅಥವಾ ದೂ.08392-273479, 278168 ಗೆ ಸಂಪರ್ಕಿಸಬಹುದು ಎಂದು ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್.ಮಂಜುನಾಥ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular