ಮುಂಬೈ: ಸಣ್ಣ ಮತ್ತು ಅತಿ ಸಣ್ಣ ಉದ್ಯಮಗಳಿಗೆ ಪೂರಕ ಭದ್ರತೆ ಇಲ್ಲದೆ ನೀಡುವ ಸಾಲದ ಮಿತಿಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್.ಬಿ.ಐ.) 10 ಲಕ್ಷ ರೂಪಾಯಿಯಿಂದ 20 ಲಕ್ಷ ರೂಪಾಯಿಗೆ ಹೆಚ್ಚಿಸಿದೆ.
ಎಂಎಸ್‌ಇ ಗಳಿಗೆ ಅಡಮಾನ ರಹಿತವಾಗಿ ನೀಡುವ ಸಾಲದ ಮಿತಿಯನ್ನು ಆರ್.ಬಿ.ಐ. 10 ಲಕ್ಷ ರೂ.ನಿಂದ 20 ಲಕ್ಷ ರೂ.ಗೆ ಹೆಚ್ಚಿಸಿದ್ದು, ಮುಂದಿನ ಹಣಕಾಸು ವರ್ಷದಿಂದ ಮಂಜೂರಾಗುವ ಸಾಲಗಳಿಗೆ ಇದು ಅನ್ವಯವಾಗಲಿದೆ. ಈ ಕುರಿತಾದ ಮಾರ್ಗಸೂಚಿಗಳನ್ನು ಆರ್.ಬಿ.ಐ. ಶೀಘ್ರವೇ ಬಿಡುಗಡೆ ಮಾಡಲಿದೆ.
ಇನ್ನು ಕಿಸಾನ್ ಕ್ರೆಡಿಟ್ ಕಾರ್ಡ್ ಮಾರ್ಗಸೂಚಿಗಳ ಪರಿಷ್ಕರಣೆಗೆ ಆರ್‌ಬಿಐ ಮುಂದಾಗಿದ್ದು, ಕಿಸಾನ್ ಕ್ರೆಡಿಟ್ ಕಾರ್ಡ್ ಅವಧಿಯನ್ನು 6 ವರ್ಷಕ್ಕೆ ವಿಸ್ತರಿಸಲಾಗುವುದು. ವ್ಯಾಪ್ತಿಯನ್ನು ಹೆಚ್ಚಳ ಮಾಡಲಾಗುವುದು. ಈ ಕುರಿತದ ಮಾರ್ಗಸೂಜಿ ಸಿದ್ಧಪಡಿಸಿ ಶೀಘ್ರದಲ್ಲೇ ಕರಡು ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

