HomeJobsಖಾಸಗಿ ಕಂಪನಿಗಳಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಖಾಸಗಿ ಕಂಪನಿಗಳಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಬಳ್ಳಾರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.27 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಜೀಟಾ, ಪಿಟ್ಟಿ (ಇಂಡಸ್ಟ್ರೀಸ್ ಪ್ರೈ.ಲಿ.), ಟೊಯೋಟಾ, ಫಾಕ್ಸ್ಕಾನ್, ಶ್ರೀ ವರ್ಧನ್ ಎಫ್‌ಎಂಸಿಜಿ ಮತ್ತು ಶ್ರೀರಾಮ್ ಫೈನಾನ್ಸ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು.

ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.  ಸಂದರ್ಶನದಲ್ಲಿ ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದು. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಮತ್ತು ಎಂಜಿನಿಯರಿಂಗ್ ಪದವಿ ಹೊಂದಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ, ಸ್ವ-ವಿವರ ಪ್ರತಿಗಳೊಂದಿಗೆ ನಗರದ ಹಳೆಯ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಅಂದು ನಡೆಯುವ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.7619207762, 9663263086, 7676774293, 6360408094 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular