HomeKarnatakaಪೊಲೀಸ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ ಖಾಲಿ ಹುದ್ದೆಗಳ ಭರ್ತಿ

ಪೊಲೀಸ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ ಖಾಲಿ ಹುದ್ದೆಗಳ ಭರ್ತಿ

ತುಮಕೂರು : ಪೊಲೀಸ್ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ಎರಡು ವರ್ಷದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ತುಮಕೂರಿನಲ್ಲಿ ಪೊಲೀಸ್ ವಸತಿ ಸಂಕಿರ್ಣ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವ ಡಾ.ಜಿ. ಪರಮೇಶ್ವರ್ ಅವರು, 1 ಲಕ್ಷ ಜನರಿಗೆ 162 ಪೊಲೀಸರು ಬೇಕು. ಆದರೆ, ಕಳೆದ ನಾಲ್ಕು ವರ್ಷದಿಂದ ಇಲಾಖೆಯಲ್ಲಿ ಯಾವುದೇ ಹುದ್ದೆಗಳ ಭರ್ತಿಯಾಗಿಲ್ಲ. ಮುಂದಿನ ಎರಡು ವರ್ಷದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಪೊಲೀಸರಿಗೆ ಸಿಹಿಸುದ್ದಿ ಕೊಟ್ಟಿರುವ ರಾಜ್ಯ ಸರ್ಕಾರ, ವೇತನ ತಾರತಮ್ಯ ನಿವಾರಣೆ ದೃಷ್ಟಿಯಿಂದ ಔರಾದ್ಕರ್ ವರದಿಯನ್ವಯ ಪೊಲೀಸರ ವೇತನ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular