ಬೆಂಗಳೂರು: ರಾಜ್ಯದ ಯುವಕರಿಗೆ ಕೌಶಲ್ಯ ತರಬೇತಿ ನೀಡುವ ಮತ್ತು ಉದ್ಯೋಗಾವಕಾಶ ಹೆಚ್ಚಿಸುವ ಕೌಶಲ್ಯ ತರಬೇತಿ ಕೇಂದ್ರ ಮತ್ತು ಪ್ರಯೋಗಾಲಯಗಳನ್ನು ಸ್ಥಾಪಿಸಲು ಇಚ್ಛಿಸುವವರಿಗೆ ಸರ್ಕಾರದಿಂದಲೇ ಅಗತ್ಯ ಭೂ ಮಂಜೂರು ಮಾಡಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಪ್ರಾಯೋಗಿಕ ತರಬೇತಿಯ ಕೊರತೆ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಕೌಶಲ್ಯಪೂರ್ಣ, ಉದ್ಯಮಕ್ಕೆ ಸಿದ್ಧ ಕಾರ್ಯಪಡೆಯನ್ನು ನಿರ್ಮಿಸಲು ನಮ್ಮ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ತರಬೇತಿ ಮೂಲಸೌಕರ್ಯ ನವೀಕರಿಸುವುದು, ನಾವೀನ್ಯತೆಯನ್ನು ಉತ್ತೇಜಿಸುವುದು, ಸಂಸ್ಥೆಗಳು ಮತ್ತು ಉದ್ಯಮಗಳ ನಡುವೆ ಸಹಯೋಗವನ್ನು ಹೆಚ್ಚಿಸುವುದಕ್ಕೆ ನೆರವು ಒದಗಿಸಲಾಗುವುದು. ರಾಜ್ಯದ ಯುವಕರು ಕೇವಲ ಉದ್ಯೋಗಕ್ಕೆ ಮಾತ್ರವಲ್ಲ, ಜಾಗತಿಕ ಆರ್ಥಿಕತೆಗೆ ಹೊಸ ರೂಪ ನೀಡಲು ಸಿದ್ಧರಾಗಬೇಕು ಎನ್ನುವುದು ನಮ್ಮ ಗುರಿ ಎಂದು ಹೇಳಿದ್ದಾರೆ.

 
			 
		 
		 
		 
		 Loading ...
 Loading ... 
		 
		 
		