ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ‘ಮುದ್ರಾ ಯೋಜನೆ’ಯಡಿ ಸಾಲ ಸೌಲಭ್ಯಕ್ಕೆ ಅರ್ಜಿ

ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 2025-26ನೇ ಸಾಲಿನ ಮುದ್ರಾ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಮಗ್ಗ ಖರೀದಿಸಲು ಅಥವಾ ದುಡಿಮೆ ಬಂಡವಾಳಕ್ಕಾಗಿ ರಾಷ್ಟ್ರೀಕೃತ ಬ್ಯಾಂಕ್‌ ನಿಂದ ಸಾಲ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಮುದ್ರಾ ಯೋಜನೆಯಡಿ ಕೊಪ್ಪಳ ಜಿಲ್ಲೆಗೆ 25 ಗುರಿ ನಿಗದಿಪಡಿಸಲಾಗಿದೆ. ಪ್ರತಿ ಫಲಾನುಭವಿಗೆ 50,000 ರೂ.ರಂತೆ ಶೇ.20 ಮಾರ್ಜಿನ್‌ ಮನಿ ಪಡೆಯಲು ಅವಕಾಶವಿರುತ್ತದೆ. ಅರ್ಹ ಫಲಾನುಭವಿಗಳು ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸದೆ ಮೇ 31ರ ಒಳಗಾಗಿ ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಉಪ ನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಅಶೋಕ ಸರ್ಕಲ್ ಹತ್ತಿರ ಕೊಪ್ಪಳ, ದೂರವಾಣಿ ಸಂಖ್ಯೆ:08539-295469 ಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read