ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆಯಾಯ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: https://sevasindhu.karnataka.gov.in
ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ):
ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ ಹಸುಗಳಿಗೆ ಘಟಕ ವೆಚ್ಚದ ಶೇ.50.ರಷ್ಟು ಸಹಾಯಧನ ಅಥವಾ ಗರಿಷ್ಟ 1.25 ಲಕ್ಷ ರೂ., ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ. ಘಟಕ ವೆಚ್ಚದ ಶೇ70.ರಷ್ಟು ಸಹಾಯಧನ ಅಥವಾ ಗರಿಷ್ಟ 2 ಲಕ್ಷ ರೂ.,
ಸ್ವಾವಲಂಬಿ ಸಾರಥಿ:
ಸರಕು ವಾಹನ/ಟ್ಯಾಕ್ಸಿ(ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ ಘಟಕ ವೆಚ್ಚದ ಶೇ.75 ರಷ್ಟು ಸಹಾಯಧನ ಅಥವಾ ಗರಿಷ್ಟ 4 ಲಕ್ಷ ರೂ., ಪುಡ್ ಟ್ರಕ್ ಟ್ರೈಲರ್/ಮೊಬೈಲ್ ಕಿಚನ್ ಪುಡ್ ಕಿಯೋಸ್ಕ್ ಉದ್ದೇಶಕ್ಕೆ ಘಟಕ ವೆಚ್ಚದ ಶೇ.75ರಷ್ಟು ಸಹಾಯಧನ ಅಥವಾ ಗರಿಷ್ಟ 4 ಲಕ್ಷ ರೂ. ಆಗಿರುತ್ತದೆ.
ಮೈಕ್ರೋ ಕ್ರೆಡಿಟ್ ಯೋಜನೆ(ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು):
ಮಹಿಳೆಯರಲ್ಲಿ ಗುಂಪು ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡಿ ಆದಾಯ ಗಳಿಸಲು ಅನುಕೂಲವಾಗುವಂತೆ ಕನಿಷ್ಟ 10 ಸದಸ್ಯರಿರುವ ಮಹಿಳಾ ಸ್ವಸಹಾಯ ಸಂಘಗಳಿಗೆ 5 ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗುವುದು. ಇದರಲ್ಲಿ 2.50 ಲಕ್ಷ ರೂ.ಸಹಾಯಧನ ಮತ್ತು 2.50 ಲಕ್ಷ ರೂ.ಸಾಲ(ಶೇಕಡ 4ರಷ್ಟು ಬಡ್ಡಿ ದರ).
ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಯೋಜನೆಗಳ ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‍ಸೈಟ್ ಮೂಲಕ ಪಡೆದುಕೊಳ್ಳುವುದು.
ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ https://adcl.karnataka.gov.in,
ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ https://adijambava.karnataka.gov.in,
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ https://www.kbdc.karnataka.gov.in,
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ https://kssksc.kar.nic.in/
ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ: https://ktdc.karnataka.gov.in
ಫಲಾಪೇಕ್ಷಿಗಳು ಆನ್‍ಲೈನ್ ಮೂಲಕ ಅರ್ಜಿಗಳನ್ನು ಮತ್ತು ದಾಖಲಾತಿಗಳನ್ನು ಸುವಿದಾ ತಂತ್ರಾಂಶದ ವೆಬ್‍ಸೈಟ್ ವಿಳಾಸ https://sevasindhu.karnataka.gov.in ಮೂಲಕ ಅಪ್‍ಲೋಡ್ ಮಾಡಿ ಅರ್ಜಿಯನ್ನು ಸೆಪ್ಟೆಂಬರ್, 10 ರೊಳಗೆ ಸಲ್ಲಿಸಿ ಒಂದು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ., ಕೊಡಗು ಜಿಲ್ಲೆ-571201 ದೂ.ಸಂ.08272-228857 ನ್ನು ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.