HomeKarnatakaಗೃಹಲಕ್ಷ್ಮಿʼ ಹಣ ಬಾರದೆ ಇರುವವರಿಗೆ ಗುಡ್ ನ್ಯೂಸ್ : ಡಿ.27 ರಂದು ತಪ್ಪದೇ ಈ ಕೆಲಸ...

ಗೃಹಲಕ್ಷ್ಮಿʼ ಹಣ ಬಾರದೆ ಇರುವವರಿಗೆ ಗುಡ್ ನ್ಯೂಸ್ : ಡಿ.27 ರಂದು ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಯಾರ ಖಾತೆಗೆ ಹಣ ಬಂದಿಲ್ಲ ಅವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.

ಗೃಹಲಕ್ಷ್ಮಿ ಯೋಜನೆಗಳ ಸಮಸ್ಯೆ ನಿವಾರಿಸಲು ಸರ್ಕಾರ ಬಿಗ್‌ ಪ್ಲ್ಯಾನ್‌ ಮಾಡಿದ್ದು, ಡಿ.27 ರಿಂದ ಡಿ.29 ರವರೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್ ನಡೆಸಲು ಸುತ್ತೋಲೆ ಹೊರಡಿಸಲಾಗಿದೆ. ಪಿಡಿಒಗಳ ನೇತೃತ್ವದಲ್ಲಿ ಕ್ಯಾಂಪ್ ಆಯೋಜನೆಯಾಗಲಿದ್ದು, ಈ ಕ್ಯಾಂಪ್ ನಲ್ಲಿ ಫಲಾನುಭವಿಗಳ ಸಮಸ್ಯೆ ಸರಿಪಡಿಸಲಾಗುತ್ತದೆ.ಪ್ರತಿ ಗ್ರಾಮ ಪಂಚಾಯತ್ ನಲ್ಲಿ ಕ್ಯಾಂಪ್ ನಡೆಯಲಿದ್ದು, ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ಗಳು, ಅಂಗನವಾಡಿ ಕಾರ್ಯಕರ್ತರು ಭಾಗಿಯಾಗುವಂತೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿ ಗ್ರಾಮ ಪಂಚಾಯತ್ ನಲ್ಲಿ ಡಿ.27 ರಿಂದ ಡಿ. 29 ರವರೆಗೆ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಕ್ಯಾಂಪ್ ಆಯೋಜಿಸುವಂತೆ ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular