ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಪ್ರತಿ ಕಾರ್ಡಿಗೆ 50 ಕೆ.ಜಿ ಅಕ್ಕಿ, 6 ಸದಸ್ಯರಿರುವ ಪ್ರತಿ ಕಾರ್ಡಿಗೆ 60 ಕೆ.ಜಿ ಅಕ್ಕಿ, 7 ಸದಸ್ಯರಿರುವ ಪ್ರತಿ ಕಾರ್ಡಿಗೆ 70 ಕೆ.ಜಿ ಅಕ್ಕಿ, 8 ಸದಸ್ಯರಿರುವ ಪ್ರತಿ ಕಾರ್ಡಿಗೆ 80 ಕೆ.ಜಿ ಅಕ್ಕಿ, 9 ಸದಸ್ಯರಿರುವ ಪ್ರತಿ ಕಾರ್ಡಿಗೆ 90 ಕೆ.ಜಿ, 10 ಸದಸ್ಯರಿರುವ ಪ್ರತಿ ಕಾರ್ಡಿಗೆ 100 ಕೆ.ಜಿ ಅಕ್ಕಿಯನ್ನು ನೀಡಲಾಗುವುದು.
ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಅಂತರ್ ರಾಜ್ಯ ಅಥವಾ ಜಿಲ್ಲೆಯ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಲು ಅವಕಾಶವಿರುತ್ತದೆ ಎಂದು ದಾವಣಗೆರೆ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

