HomeLatest Newsಕೋರ್ಟ್ ಗೆ ಅಲೆದಾಡಿ ಸಾಕಾದವರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಜುಲೈ 12ರಂದು ಬೃಹತ್ ಲೋಕ್ ಅದಾಲತ್...

ಕೋರ್ಟ್ ಗೆ ಅಲೆದಾಡಿ ಸಾಕಾದವರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಜುಲೈ 12ರಂದು ಬೃಹತ್ ಲೋಕ್ ಅದಾಲತ್ | Mega Lok Adalath

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಜ್ಯಾದ್ಯಂತ ಜುಲೈ 12 ರಂದು ಬೃಹತ್ ಜನತಾ ನ್ಯಾಯಾಲಯ(Mega Lok Adalath) ನಡೆಯಲಿದೆ.

ಅಂದು ನಡೆಯಲಿರುವ ಬೃಹತ್ ಲೋಕ್ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಎಲ್ಲಾ ವಿಧದ ಸಿವಿಲ್ ವ್ಯಾಜ್ಯಗಳು, ಬಗೆಹರಿಸಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ವಾಹನ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ಕಂದಾಯ ಪ್ರಕರಣಗಳು, ಜನನ ಮತ್ತು ಮರಣ ನೋಂದಣಿ ಪ್ರಕರಣಗಳು, ಜೀವನಾಂಶ ಪ್ರಕರಣಗಳು ಹಾಗೂ ಇನ್ನಿತರೆ ಲಘು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಮತ್ತು ವ್ಯಾಜ್ಯಪೂರ್ವ ಬ್ಯಾಂಕ್ ಸಾಲ ಮರುಪಾವತಿಯ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ.

ಸಂಬಂಧಪಟ್ಟ ಕಕ್ಷಿಗಾರರು ವಕೀಲರ ಮೂಲಕ ಅಥವಾ ಖುದ್ದಾಗಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಕೊಳ್ಳಬಹುದಾಗಿದ್ದು, ಇದರ ಸದುಪಯೋಗ ಪಡೆಯುವಂತೆ ಹಾಸನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular