HomeLatest Newsಆಧಾರ್ ಕಾರ್ಡ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: ಪಿಎಂ ಆವಾಸ್ ಯೋಜನೆಯಡಿ ಮನೆ...

ಆಧಾರ್ ಕಾರ್ಡ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: ಪಿಎಂ ಆವಾಸ್ ಯೋಜನೆಯಡಿ ಮನೆ ಸೌಲಭ್ಯ

2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ)2.0 ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಂಟಿ ಮಹಿಳೆಯರು, ಅಂಗವಿಕಲರು, ಹಿರಿಯ ನಾಗರಿಕರು, ತೃತೀಯ ಲಿಂಗಿಗಳು, ಎಸ್‌ಸಿ/ಎಸ್‌ಟಿ/ಹಿಂದುಳಿದ/ಅಲ್ಪ ಸಂಖ್ಯಾತ ವರ್ಗದವರು, ಸ್ವಚ್ಛತಾ ಕಾರ್ಮಿಕರು, PM-SAVnidhi ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ್ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೈಗಾರಿಕೆ ಕಾರ್ಮಿಕರು, ವಲಸೆ ಬಂದ ಕುಟುಂಬದವರು ತಮ್ಮ ಅರ್ಜಿಗಳನ್ನು ಜುಲೈ 15 ರೊಳಗಾಗಿ  https://pmaymis.gov.in/PMAYMIS2_2024/PMAY_SURVEY/EligiblityCheck.aspx ನಲ್ಲಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ನಂತರ ಅರ್ಜಿ ಪ್ರತಿಯೊಂದಿಗೆ ಆಧಾರ್ ಕಾರ್ಡ್(ಮನೆಯ ಯಜಮಾನ/ನಿ ಹಾಗೂ ತಂದೆ/ತಾಯಿಯ ಮತ್ತು ಪಡಿತರ ಚೀಟಿಯಲ್ಲಿ ಇರುವಂತೆ ಕುಟುಂಬ ಸದಸ್ಯರ ಆಧಾರ್ ಕಾರ್ಡ್ ಗಳು), ವಸತಿ ರಹಿತರಾದಲ್ಲಿ ನಿವೇಶನಕ್ಕೆ ಸಂಬಂಧಿಸಿದ ದಾಖಲೆಗಳು(ಹಕ್ಕುಪತ್ರ/ಕ್ರಯಪತ್ರ /ದಾನಪತ್ರ/ಉಡುಗೊರೆ ಪತ್ರ/ಖಾತಾ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಪಾಸ್‌ಬುಕ್ ಪ್ರತಿ, ನಿಗದಿತ ನಮೂನೆ (Annexure-2A/2B/2C) ಯಲ್ಲಿ  Self Undertaking ಸಲ್ಲಿಸುವುದು. ಮೊಬೈಲ್ ಸಂಖ್ಯೆ, ಪ್ಯಾನ್ ಕಾರ್ಡ್(ಲಭ್ಯವಿದ್ದಲ್ಲಿ ಮಾತ್ರ)ಗಳನ್ನು ಲಗತ್ತಿಸಿ ಪಟ್ಟಣ ಪಂಚಾಯತಿ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ಶಾಖೆಯ ಅಧಿಕಾರಿಗಳನ್ನು ಕಛೇರಿಯ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕೊಪ್ಪಳ ಜಿಲ್ಲೆ ಕುಕನೂರು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular