‘ಭಾರತೀಯ ಸೇನೆ’ ಸೇರ ಬಯಸುವವರಿಗೆ ಗುಡ್ ನ್ಯೂಸ್ : ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗಳ ಅರ್ಹ ಅಭ್ಯರ್ಥಿಗಳಿಂದ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ಆಸಕ್ತ 17 1/2 ರಿಂದ 21 ವರ್ಷದೊಳಗಿನ ಯುವಕರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಆನ್ಲೈನ್ https://bcwd.karnataka.gov.in ಮೂಲಕ ಸೆ. 15 ರೊಳಗಾಗಿ ಅರ್ಜಿ ಸಲ್ಲಿಸುವುದು.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಮತ್ತು ಕುಟುಂಬದ ವಾರ್ಷಿಕ ಆದಾಯ ಪ್ರವರ್ಗ-1ಕ್ಕೆ ರೂ. 2.50 ಲಕ್ಷಗಳು ಹಾಗೂ ಪ್ರ-2ಎ, 3ಎ, 3ಬಿ ಗಳಿಗೆ ರೂ. 1.00 ಲಕ್ಷಗಳಾಗಿದ್ದು, ಅಭ್ಯರ್ಥಿಯು 10ನೇ ತರಗತಿಯಲ್ಲಿ ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳನ್ನು ಪಡೆದಿರಬೇಕು. ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಯಾವುದಾದರೊಂದು ಜಿಲ್ಲೆಯನ್ನು ಮಾತ್ರ ಆಯ್ಕೆ ಮಾಡುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ.: 8050770004, ದ.ಕ.-0824-2225078, ಉಡುಪಿ-0820-2574881 ಹಾಗೂ ಉ.ಕ.-08382-226589 ಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read