
ಆಸಕ್ತರು ಆನ್ಲೈನ್ https://bcwd.karnataka.gov.in ಮೂಲಕ ಸೆ. 15 ರೊಳಗಾಗಿ ಅರ್ಜಿ ಸಲ್ಲಿಸುವುದು.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಮತ್ತು ಕುಟುಂಬದ ವಾರ್ಷಿಕ ಆದಾಯ ಪ್ರವರ್ಗ-1ಕ್ಕೆ ರೂ. 2.50 ಲಕ್ಷಗಳು ಹಾಗೂ ಪ್ರ-2ಎ, 3ಎ, 3ಬಿ ಗಳಿಗೆ ರೂ. 1.00 ಲಕ್ಷಗಳಾಗಿದ್ದು, ಅಭ್ಯರ್ಥಿಯು 10ನೇ ತರಗತಿಯಲ್ಲಿ ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳನ್ನು ಪಡೆದಿರಬೇಕು. ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಯಾವುದಾದರೊಂದು ಜಿಲ್ಲೆಯನ್ನು ಮಾತ್ರ ಆಯ್ಕೆ ಮಾಡುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ.: 8050770004, ದ.ಕ.-0824-2225078, ಉಡುಪಿ-0820-2574881 ಹಾಗೂ ಉ.ಕ.-08382-226589 ಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

