
ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ, 2003 ರ ಜನವರಿ 1 ರಿಂದ 2006 ರ ಜುಲೈ 1 ರ ನಡುವೆ ಜನಿಸಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತರಬೇತಿ ನೀಡಲಾಗುವುದು.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 805077000, ದೂ. ಸಂಖ್ಯೆ: 0820-2574881 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

