HomeKarnatakaJOB ALERT : 'ಸೇನೆ' ಸೇರಬಯಸುವವರಿಗೆ ಗುಡ್ ನ್ಯೂಸ್ : 'ಅಗ್ನಿವೀರ್' ನೇಮಕಾತಿ ಪರೀಕ್ಷೆಗೆ ಅರ್ಜಿ...

JOB ALERT : ‘ಸೇನೆ’ ಸೇರಬಯಸುವವರಿಗೆ ಗುಡ್ ನ್ಯೂಸ್ : ‘ಅಗ್ನಿವೀರ್’ ನೇಮಕಾತಿ ಪರೀಕ್ಷೆಗೆ ಅರ್ಜಿ ಅಹ್ವಾನ |Agniveer Recruitment 2025

ಶಿವಮೊಗ್ಗ : ಅಗ್ನಿಪಥ್ ಯೋಜನೆಯಡಿ 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಆನ್ಲೈನ್ ನೋಂದಣಿಯು ಮಾರ್ಚ್ 12 ರಿಂದ ಏಪ್ರಿಲ್ 10 ರವರೆಗೆ ಇರುತ್ತದೆ. ನೋಂದಣಿ ಪೊರ್ಟಲ್- WWW.JOININDINARMY.NIC.IN ಹಾಗೂ ಆನ್ಲೈನ್ ಪರೀಕ್ಷೆಯು ಜೂನ್ 2025 ರಲ್ಲಿ ನಡೆಯುವ ಸಾಧ್ಯತೆಯಿದ್ದು, ದಿನಾಂಕವನ್ನು ನಂತರ ಪ್ರಕಟಿಸಲಾಗುವುದು.

ಭಾರತೀಯ ಸೇನೆಯಲ್ಲಿ ಆಯ್ಕೆ ‘ನ್ಯಾಯಯುತ ಮತ್ತು ಪಾರದರ್ಶಕ’ವಾಗಿದ್ದು, ಅರ್ಹತೆ ಮೇಲೆ ಮಾತ್ರ ನಡೆಯುತ್ತದೆ. ಯಾವುದೇ ಹಂತದಲ್ಲಿ ಭಾರತೀಯ ಸೇನೆಯಲ್ಲಿ ಆಯ್ಕೆ ಅಥವಾ ನೇಮಕಾತಿಗಾಗಿ ಯಾರಿಗೂ ಲಂಚ ನೀಡಬಾರದು ಹಾಗೂ ನೇಮಕಾತಿ ಏಜೆಂಟ್ಗಳ<ತೆ ನಟಿಸುವ, ಆಮಿಷ ಒಡ್ಡುವ ವ್ಯಕ್ತಿಗಳಿಗೆ ಬಲಿಯಾಗಬಾರದೆಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸೇನಾ ನೇಮಕಾತಿ ಕಛೇರಿ ದೂರವಾಣಿ ಸಂಖ್ಯೆ- 0824-2951279 ಹಾಗೂ ಇಮೇಲ್: [email protected] kಸಂಪರ್ಕಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular