HomeKarnatakaಭಾರತೀಯ ಸೇನೆ ಸೇರ ಬಯಸುವವರಿಗೆ ಗುಡ್ ನ್ಯೂಸ್ : ಉಚಿತ ವೃತ್ತಿ ಮಾರ್ಗದರ್ಶನ, ತರಬೇತಿಗೆ ಅರ್ಜಿ...

ಭಾರತೀಯ ಸೇನೆ ಸೇರ ಬಯಸುವವರಿಗೆ ಗುಡ್ ನ್ಯೂಸ್ : ಉಚಿತ ವೃತ್ತಿ ಮಾರ್ಗದರ್ಶನ, ತರಬೇತಿಗೆ ಅರ್ಜಿ ಆಹ್ವಾನ

ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಮತ್ತು 3(ಬಿ) ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿನ (ಬಾಲಕರಿಗೆ ಮಾತ್ರ) ಆಯ್ಕೆ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಆಯಾ ಜಿಲ್ಲೆಯ ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದು ಅಥವಾ ವೆಬ್‌ಸೈಟ್ https://udupi.nic.in ರಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆಯ ಮೂಲಕ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಠಡಿ ಸಂ.:304, ಬಿ-ಬ್ಲಾಕ್, 2ನೇ ಮಹಡಿ, ರಜತಾದ್ರಿ, ಮಣಿಪಾಲ-576104, ಉಡುಪಿ ಜಿಲ್ಲೆ ದೂ. ಸಂ.:0820-2574881 ಇಲ್ಲಿಗೆ ಏ.27 ರೊಳಗಾಗಿ ಸಲ್ಲಿಸುವುದು.

ಅರ್ಹ ಅಭ್ಯರ್ಥಿಗಳನ್ನು ಮಹಾತ್ಮಗಾಂಧಿ ಮೈದಾನ, ಅಜ್ಜರಕಾಡು, ಉಡುಪಿ ಇಲ್ಲಿ ಮೇ.02 ರಂದು ಜರುಗುವ ರ‍್ಯಾಲಿಯಲ್ಲಿ ಆಯ್ಕೆ ಮಾಡಲಾಗುವುದು. ತರಬೇತಿ ಅವಧಿಯು ಒಟ್ಟು 4 ತಿಂಗಳುಗಳಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ವಸತಿ, ಊಟ, ತರಬೇತಿ ವೆಚ್ಚ, ಒಂದು ಜೊತೆ ಟ್ರಾಕ್ ಸೂಟ್, ಶೂ ಹಾಗೂ ದೈಹಿಕ ತರಬೇತಿಯ ಸಮವಸ್ತ್ರ ಉಚಿತವಾಗಿ ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸಲ್ಲಿಸಲು ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಟ ವಾರ್ಷಿಕ ಆದಾಯ ಮಿತಿ ಪ್ರವರ್ಗ-1ಕ್ಕೆ ರೂ.2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ. 1 ಲಕ್ಷ ಒಳಗೊಂಡಿರಬೇಕು. ಅಭ್ಯರ್ಥಿಯು 10 ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಟ 33 ಅಂಕಗಳು ಮತ್ತು ಸರಾಸರಿ ಶೇ.45 ರಷ್ಟು ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಂ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು. ಜನ್ಮ ದಿನಾಂಕ ಮತ್ತು ವಯಸ್ಸು 27/04/2026ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯು 27/04/2006 ರಿಂದ 27/04/2009 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು. ಅಭ್ಯರ್ಥಿಗಳಿಗೆ ತರಬೇತಿಯನ್ನು ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆ, ಹನೆಹಳ್ಳಿ, ಬಾರ್ಕೂರು, ಬ್ರಹ್ಮಾವರ ತಾಲೂಕು ಉಡುಪಿ ಜಿಲ್ಲೆ ಇಲ್ಲಿ ನೀಡಲಾಗುವುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ 08182-222129 ಹಾಗೂ 0820-2574881 ಗಳನ್ನು ಸಂಪರ್ಕಿಸುವುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular