HomeKarnatakaಹೊಸ `ಪಡಿತರ ಚೀಟಿ' ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ ಹೊಸ `ರೇಷನ್ ಕಾರ್ಡ್’ ವಿತರಣೆ

ಹೊಸ `ಪಡಿತರ ಚೀಟಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ ಹೊಸ `ರೇಷನ್ ಕಾರ್ಡ್’ ವಿತರಣೆ

ಬೆಂಗಳೂರು : ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವವರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಹೊಸ ಪಡಿತರ ಚೀಟಿ ವಿತರಣೆ ಮಾಡಲು ನಿರ್ಧರಿಸಿದೆ.

ಪಡಿತರ ಚೀಟಿ ತಿದ್ದುಪಡಿಗೆ ಸೆಪ್ಟೆಂಬರ್‌ 1 ರಿಂದ 14ರ ವರೆಗೆ ಅವಕಾಶ ನೀಡಿತ್ತು.ಇದೀಗ ರಾಜ್ಯ ಸರ್ಕಾರವು ಮತ್ತೊಮ್ಮೆ ಅವಕಾಶ ನೀಡಿದೆ.  ಈ ಹಿನ್ನೆಲೆಯಲ್ಲಿ ಲಕ್ಷಾಂತರ ಜನರು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಿಕೊಂಡಿದ್ದು, ಹಲವು ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಡಿತರ ಚೀಟಗೆ ಈಗಾಗಲೇ ಅರ್ಜಿ ಸಲ್ಲಿಸಿದವರ ಅರ್ಜಿಗಳ ಪರಿಶೀಲನಾ ಕಾರ್ಯ ಶೇ.75ರಷ್ಟು ಪರಿಶೀಲನಾ ಕಾರ್ಯ ಪೂರ್ಣಗೊಂಡಿದೆ. ಪರಿಶೀಲನಾ ಕಾರ್ಯ ಸಂಪೂರ್ಣವಾಗಿ ಮುಗಿದ ನಂತರದಲ್ಲಿ ಅರ್ಜಿ ಸಲ್ಲಿಸಿದವರ ಪೈಕಿ ಅರ್ಹರಿಗೆ ಮಾತ್ರವೇ ಪಡಿತರ ಚೀಟಿ ಕೈ ಸೇರಲಿದೆ.

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ಶೀಘ್ರದಲ್ಲಿಯೇ ಪಡಿತರ ಚೀಟಿ ವಿತರಣೆ ಮಾಡಲಾಗುತ್ತದೆ. ಈಗಾಗಲೇ ಅರ್ಜಿ ಸಲ್ಲಿಸಿರುವವರ ಕಾರ್ಡುಗಳ ವಿಲೇವಾರಿ ಆದ ನಂತರದಲ್ಲಿ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular