ನಿಗಮ ಮಂಡಳಿ ನೇಮಕದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು : ನಿಗಮ-ಮಂಡಳಿ ನೇಮಕದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಮುಖಂಡರು, ಶಾಸಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ನೇಮಕ ಸಂಬಂಬಂಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸಭೆ ನಡೆಸಿದ್ದಾರೆ ಎನ್ನಲಾಗಿದೆ. 

ನಿಗಮ-ಮಂಡಳಿಗಳಿಗೆ ಯಾವೆಲ್ಲಾ ಶಾಸಕರಿಗೆ ಹಾಗೂ ಮುಖಂಡರಿಗೆ ಅವಕಾಶ ಕೊಡಬೇಕೆಂದು ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಚರ್ಚೆ ನಡೆಸಿದ್ದು, ಶೇ. 50 ರಂತೆ ನಿಗಮ-ಮಂಡಳಿಗಳನ್ನು ಹಂಚಿಕೊಂಡು ಪಟ್ಟಿ ಅಂತಿಮಗೊಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ಮುಖಂಡರು ಹಾಗೂ ಶಾಸಕರು ನಿರೀಕ್ಷೆ ಇಟ್ಟುಕೊಂಡಿರುವ ನಿಗಮ-ಮಂಡಳಿ ನೇಮಕ ಸಂಭಾವ್ಯ ಪಟ್ಟಿ ತಯಾರು ಮಾಡುವ ಪ್ರಕ್ರಿಯೆ ಕೊನೆಯ ಹಂತ ತಲುಪಿದ್ದು, ಯಾರ್ಯಾರಿಗೆ ನಿಗಮ-ಮಂಡಳಿ ಸ್ಥಾನ ಸಿಗಲಿದೆ ಕಾದು ನೋಡಬೇಕು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read