HomeLatest Newsಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ 50 ಲಕ್ಷದವರೆಗೆ ಸಾಲ, ಶೇ. 35ರವರೆಗೆ ಸಹಾಯಧನ...

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ 50 ಲಕ್ಷದವರೆಗೆ ಸಾಲ, ಶೇ. 35ರವರೆಗೆ ಸಹಾಯಧನ ಸೌಲಭ್ಯ

2025-26ನೇ ಸಾಲಿನ ಭಾರತ ಸರ್ಕಾರದ ಪ್ರಧಾನಮಂತ್ರಿ ಉದ್ಯೋಗ ಸೃಜನ (ಪಿಎಂಇಜಿಪಿ) ಕಾರ್ಯಕ್ರಮದಡಿಯಲ್ಲಿ ಉತ್ಪಾದನೆ /ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮುಖಾಂತರ ಹೊಸದಾಗಿ ಸ್ವಂತ ಉದ್ಯೋಗ ಆರಂಭಿಸುವ ಎಲ್ಲಾ ವರ್ಗದ ನಿರುದ್ಯೋಗ ಯುವಕ, ಯುವತಿಯರಿಂದ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಪಟ್ಟಣ, ನಗರ, ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಉದ್ದಿಮೆ ಸ್ಥಾಪಿಸುವವರಿಗೆ ಬ್ಯಾಂಕಿನಿಂದ ಉತ್ಪಾದನಾ ಉದ್ದಿಮೆಗಳಿಗೆ ಗರಿಷ್ಠ 50 ಲಕ್ಷ ರೂ.ವರೆಗೆ ಹಾಗೂ ಸೇವಾ ಉದ್ದಿಮೆಗಳಿಗೆ ಗರಿಷ್ಠ 20 ಲಕ್ಷ ರೂ.ವರೆಗೆ ಸಾಲವನ್ನು ಪಡೆದರೆ ಶೇ.15 ರಿಂದ 35 ರವರೆಗೆ ಸಹಾಯಧನ ನೀಡಲಾಗುವುದು.

ಕಾಫಿ ಗ್ರೈಂಡಿಂಗ್, ಪ್ಲೋರ್ ಮಿಲ್, ಸಿಮೆಂಟ್ ಬ್ಲಾಕ್ಸ್, ವರ್ಮಿ ಕಾಂಪೋಸ್ಟ್, ಜೇನು ಕೃಷಿ, ಎಣ್ಣೆ ತಯಾರಿಕೆ, ರಬ್ಬರ್, ಪಶು ಆಹಾರ, ಜ್ಯೂಸ್ ತಯಾರಿಕೆ, ರೆಡಿಮೆಡ್ ಗಾರ್ಮೆಂಟ್ಸ್, ಫ್ಲೆಕ್ಸ್ ಅಂಡ್ ಪ್ರಿಂಟಿಂಗ್ ಪ್ರೆಸ್, ಬ್ಯೂಟಿ ಪಾರ್ಲರ್, ಸಲೂನ್ ಎಕ್ಸ್-ರೇ ಸ್ಕ್ಯಾನಿಂಗ್, ಮೆಡಿಕಲ್ ಲ್ಯಾಬ್, ಅಡಿಕೆ ತಟ್ಟೆ ತಯಾರಿಕೆ, ಪೇಪರ್ ಪ್ಲೇಟ್ಸ್ ಮತ್ತು ಕಪ್ಸ್, ಸೆಂಟ್ರಿಂಗ್ ವರ್ಕ್ಸ್, ವೆಲ್ಡಿಂಗ್, ವಾಟರ್ ಸರ್ವೀಸ್ ಸ್ಟೇಷನ್, ಹಸು, ಕುರಿ, ಮೇಕೆ, ಎಮ್ಮೆ, ಕೋಳಿ, ಬಾತು ಕೋಳಿ, ಮೀನು ಸಾಕಾಣಿಕೆ ಹಾಗೂ ಸಸ್ಯಹಾರಿ ಮತ್ತು ಮಾಂಸಾಹಾರಿ ಹೋಟೆಲ್ ಮತ್ತು ಇತರೆ 630 ಕ್ಕೂ ಅಧಿಕ ಉದ್ದಿಮೆಗಳಿಗೆ ಸಾಲ ಸಹಾಯಧನ ನೀಡಲಾಗುವುದು. ಈ ಸೌಲಭ್ಯವನ್ನು ಪಡೆಯಲು ಆನ್‍ಲೈನ್ ಮೂಲಕ https://www.kviconline.gov.in (ಪಿಎಂಇಜಿಪಿ) ನಲ್ಲಿ ಅರ್ಜಿ ಸಲ್ಲಿಸುವಾಗ ಏಜೆನ್ಸಿ ಕೆವಿಐಬಿ ಎಂದು ಅಳವಡಿಸಿ ಅರ್ಜಿ ಸಲ್ಲಿಸುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ವಿವರಗಳಿಗೆ ಹೆಚ್.ಆರ್.ಸುಧಾಮ, ಜಿಲ್ಲಾ ಅಭಿವೃದ್ಧಿ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಕೊಹಿನೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇವರ ಕಚೇರಿಯನ್ನು ಹಾಗೂ ದೂ.ಸಂ. 08272-225946 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಭಿವೃದ್ಧಿ ಅಧಿಕಾರಿ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular