HomeJobsನರ್ಸಿಂಗ್ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ಶುಶ್ರೂಷಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ನರ್ಸಿಂಗ್ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ಶುಶ್ರೂಷಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ಅನುಮೋದನೆಯಾಗಿ ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ 13 ಶುಶ್ರೂಷಕಿಯರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿ ಅನ್ವಯ ನಿಯಮಾನುಸಾರ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಷರತ್ತು ಮತ್ತು ನಿಬಂಧನೆಗೆ ಒಳಪಟ್ಟು ದಾಖಲಾತಿಗಳನ್ನು ಪರಿಶೀಲನೆಯನ್ನು ಜು.28 ರಂದು ಬೆ.10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಇಲ್ಲಿ ನಡೆಸಲಾಗುವುದು.

ವಿದ್ಯಾರ್ಹತೆ:

ನರ್ಸಿಂಗ್ ವಿದ್ಯಾರ್ಹತೆಯನ್ನು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು ಹಾಗೂ ಕರ್ನಾಟಕ ನರ್ಸಿಂಗ್ ಕೌನ್ಸಿಲಿಂಗ್‌ ನಲ್ಲಿ ನೋಂದಣಿಯಾಗಿರಬೇಕು. ವಯೋಮಿತಿ 45 ವರ್ಷಗಳು, ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ. ಕಿಯೋನಿಕ್ಸ್ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಹಾಗೂ ಕಡ್ಡಾಯ MS Office ಬಗ್ಗೆ ಮಾಹಿತಿ ಹೊಂದಿರತಕ್ಕದು. ಮಾಸಿಕ ವೇತನ 14,581 ರೂ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಜು.22 ರಿಂದ ಜು.24 ರವರೆಗೆ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳ ಕಚೇರಿ ಹಾಸನ ರವರಿಂದ ಅರ್ಜಿಗಳನ್ನು ಪಡೆದು ಅದೇ ದಿನ ಭರ್ತಿ ಮಾಡಿ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಅರ್ಜಿಗಳನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮೇಲಿನ ದಿನಾಂಕದಂದು ಮೂಲ ದಾಖಲಾತಿಗಳೊಂದಿಗೆ ಪರಿಶೀಲನೆಗೆ ಹಾಜರಾಗಲು ಸೂಚಿಸಿದೆ. ಅರ್ಜಿ ಸಲ್ಲಿಸಲು ಜು.24 ಕೊನೆಯ ದಿನಾಂಕವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular